30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

ಮಂಗಳೂರು: ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯನಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ.

ಮಂಗಳೂರಿನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅ.22 ರಂದು ನಡೆದ ಸಕ್ರಿಯ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ಸಮ್ಮುಖದಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರು ಸಕ್ರಿಯ ಸದಸ್ಯನಾಗಿ ನೋಂದಣಿ ಮಾಡಿಕೊಂಡರು.

ಈ ವೇಳೆ ಮಾತನಾಡಿದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಕ್ರಿಯ ಸದಸ್ಯತಾ ಅಭಿಯಾನವನ್ನು ಪ್ರಾರಂಭಿಸುವ ಮೂಲಕ ಭಾರತೀಯ ಜನತಾ ಪಾರ್ಟಿಯ ಮೊದಲ ಸಕ್ರಿಯ ಸದಸ್ಯರಾಗಿ ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ. ನಮ್ಮ ಪಾರ್ಟಿಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸಲು ಹಾಗೂ ಪ್ರಧಾನಿ‌ ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಗೆ ವೇಗ ನೀಡುವ ನಿಟ್ಟಿನಲ್ಲಿ ಈ ಅಭಿಯಾನ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಎಂದರು.

ಸಂಘಟನಾ ಪರ್ವದ ರಾಜ್ಯ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್‌ ಕಾರ್ಣಿಕ್ ಮತ್ತು ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Related posts

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya
error: Content is protected !!