July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನಾ ಸಮಾರಂಭ ಮತ್ತು ಗ್ರಾಮ ಪಂಚಾಯತ್ ಬಳಂಜ, ಹಳೇ ವಿದ್ಯಾರ್ಥಿ ಸಂಘ ಪೆರೋಡಿತ್ತಾಯಕಟ್ಟೆ, ಮೀಡಿಯಾ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಅ. 29ರಂದು ಪೆರೋಡಿತ್ತಾಯಕಟ್ಟೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಭಯ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್, ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ, ಆಸ್ಪತ್ರೆ ಉಜಿರೆ ಮ್ಯಾನೆಜಿಂಗ್ ಡೈರೆಕ್ಟರ್ ಎಂ. ಜನಾರ್ಧನ, ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೋಭಾ ಕುಲಾಲ್, ಪೆರೋಡಿತ್ತಾಯಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ಅರ್ಕಕೀರ್ತಿ ಹೆಗ್ಡೆ , ಹಳೇ ವಿದ್ಯಾರ್ಥಿ ಸಂಘ / ಮೀಡಿಯಾ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನೇಸರ, ವಿಠಲ ಹೆಗ್ಡೆ ಕಟ್ಟಡದ ಮಾಲಕರು, ಪೆರೋಡಿತ್ತಾಯಕಟ್ಟೆ, ಬಳಂಜ ಗ್ರಾಮ ಪಂಚಾಯತ್ ಪಿ.ಡಿ.ಒ. ಗಣೇಶ್ ಶೆಟ್ಟಿ, ಪೆರೋಡಿತ್ತಾಯಕಟ್ಟೆ ಸ.ಉ. ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರು ಬೆನೆಡಿಕ್ಟ್ ಪ್ಯಾಸ್, ಪೆರೋಡಿತ್ತಾಯಕಟ್ಟೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೊಟ್ಟಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. – ಪಿ.ಯು.ಸಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ,

Related posts

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಗ್ರಾಮ‌ ಸಮಿತಿ ನೆರಿಯ ವತಿಯಿಂದ ಗೋಪೂಜೆ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya
error: Content is protected !!