25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ


ಕಲ್ಮಂಜ: ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2024- 25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಜ್ಞಾನಾಮೃತ ಸಭಾಂಗಣದಲ್ಲಿ ಅದ್ದೂರಿಯಿಂದ ನೆರವೇರಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗುರುದೇವ ಎಜುಕೇಶನ್ ಟ್ರಸ್ಟ್ ನ ಸದಸ್ಯರಾದಂತಹ ಪ್ರೀತಿತಾ ಧರ್ಮ ವಿಜೇತ್ ವಹಿಸಿಕೊಂಡಿದ್ದು ಅಧ್ಯಕ್ಷೀಯ ನುಡಿಗಳೊಂದಿಗೆ ಸ್ವಯಂಸೇವಕರ ಶ್ರಮದಾನ, ಸಾಂಸ್ಕೃತಿಕ, ಶೈಕ್ಷಣಿಕ ವಿಚಾರದ ಕುರಿತಾಗಿ ಅದ್ಭುತ ಮಾತುಗಳನ್ನಾಡಿ ವಿದ್ಯಾರ್ಥಿಗಳು ಏಳು ದಿನದ ಶಿಬಿರವನ್ನು ಸದ್ಬಳಕೆ ಮಾಡಿಕೊಂಡಿದ್ದಾರೆ ಎಂದು ಶಿಬಿರದ ಕುರಿತು ಗೌರವ ಮಾತುಗಳನ್ನಾಡಿದರು.


ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನವನ್ನು ವಹಿಸಿಕೊಂಡಿದ್ದಂತಹ ಸರಕಾರಿ ಪ್ರೌಢಶಾಲೆ ಕಲ್ಮಂಜದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪೂರ್ಣಿಮಾ ವಿದ್ಯಾರ್ಥಿಗಳ , ಸ್ವಯಂಸೇವಕರ ಹಾಗೂ ಗುರುದೇವ ಶಿಕ್ಷಣ ಸಂಸ್ಥೆಯ ಕುರಿತಾಗಿ, ರಾಷ್ಟ್ರೀಯ ಸೇವಾ ಯೋಜನೆಯ ಕುರಿತಾಗಿ ಹಿತ ನುಡಿಗಳನ್ನಾಡಿದರು. ಅಲ್ಲದೆ ವೇದಿಕೆಯಲ್ಲಿ ಮುಖ್ಯ ಅತಿಥಿ ಗಳಾಗಿ ಉಪಸ್ಥಿತಿಯನ್ನು ವಹಿಸಿಕೊಂಡಿದ್ದಂತಹ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದಂತಹ ಡಾ. ಸವಿತಾರವರು ಅಭಿನಂದನ ಮಾತುಗಳನ್ನಾಡಿದರು ಜೊತೆಗೆ ಕಲ್ಮಂಜ ಸರಕಾರಿ ಪ್ರೌಢಶಾಲೆ ಶಿಕ್ಷಣಕ್ಕೆ ಉತ್ತಮ ಕೊಡುಗೆಯನ್ನು ನೀಡುತ್ತಾ ಇದ್ದು ಗುರುದೇವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರವನ್ನು ಆಯೋಜಿಸಿದ್ದಕ್ಕೆ ಅವಕಾಶ ಮಾಡಿಕೊಟ್ಟಂತಹ ಸರಕಾರಿ ಪ್ರೌಢಶಾಲೆ ಕಲ್ಮಂಜದ ಮುಖ್ಯೋಪಾಧ್ಯಾಯನಿಯವರನ್ನು ಹಾಗೆ ಶಾಲೆಯ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದವನ್ನು ಜೊತೆಗೆ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಶಿಬಿರಾರ್ಥಿಗಳನ್ನು, ಯೋಜನಾಧಿಕಾರಿಗಳನ್ನು, ಸಹ ಯೋಜನಾಧಿಕಾರಿಗಳನ್ನು ಅಭಿನಂದಿಸಿದರು.

ಸರಕಾರಿ ಪ್ರೌಢಶಾಲೆ ಕಲ್ಮಂಜದ ಎಸ್‌.ಡಿ. ಎಂ.ಸಿ.ಯ ಕಾರ್ಯಾಧ್ಯಕ್ಷ ಮಂಜುನಾಥ್ ಶೆಟ್ಟಿ ಶಿಬಿರಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗುರು ನಾರಾಯಣ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಸರಕಾರಿ ಪ್ರೌಢಶಾಲೆ ಕಲ್ಮಂಜ ಎಸ್ ಡಿ ಎಮ್ ಸಿ ಯ ಮಾಜಿ ಅಧ್ಯಕ್ಷ ಕರುಣಾಕರ ಆಚಾರ್ಯ, ಹಾಗೆಯೇ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2024- 25 ನೇ ಸಾಲಿನ ನಾಯಕಿ ಚಂದನ ನಾಯಕ ಮಿಥುನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಿಬಿರಾರ್ಥಿಗಳು ಅನಿಸಿಕೆಯನ್ನು ವ್ಯಕ್ತಪಡಿಸಿದ್ದಲ್ಲದೆ ಏಳು ದಿನದ ಶಿಬಿರದಲ್ಲಿ ಮಾಡಿದ ಸಾಧನೆಗಾಗಿ ಬಹುಮಾನವನ್ನು ಹಾಗೂ ಸ್ಮರಣಿಕೆಯನ್ನು ಪಡೆದುಕೊಂಡರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದಂತಹ ಬಿಎ ಶಮಿವುಲ್ಲಾ ಅವರು ತಮ್ಮ ಸ್ವಾಗತ ಭಾಷಣದೊಂದಿಗೆ ಶಿಬಿರದ ಏಳು ದಿನದ ಸಾಧನೆಯನ್ನು ವ್ಯಕ್ತಪಡಿಸಿದರು. ಸಹಯೋಜನಾಧಿಕಾರಿಗಳಾದಂತಹ ಸತೀಶ್ ಸಾಲಿಯಾನ್ ಹಾಗೂ ಶ್ರೀಮತಿ ಶ್ವೇತಾ ಇವರ ಸಹಕಾರದೊಂದಿಗೆ ಶಿಬಿರದ ಯಶಸ್ಸು ನೆರವೇರಿತು ಎನ್ನುವ ಅದ್ಭುತ ಮಾತುಗಳನ್ನಾಡಿದರು. ಸಹಯೋಜನಾಧಿಕಾರಿಯದಂತಹ ಶ್ರೀಮತಿ ಶ್ವೇತಾ ವರದಿಯನ್ನು ವಾಚಿಸಿದರು. ಕಾರ್ಯಕ್ರಮದಲ್ಲಿ ಗುರುದೇವ ಪ್ರಥಮದರ್ಜೆ ಕಾಲೇಜಿನ ಆಡಳಿತ ಮಂಡಳಿ ಉಪನ್ಯಾಸ ವೃಂದ, ಕಛೇರಿ ಸಿಬ್ಬಂದಿಗಳು , ಹಿರಿಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಸರಕಾರಿ ಪ್ರೌಢಶಾಲೆ ಕಲ್ಮಂಜದ ಬೋಧಕ, ಭೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಶಿಬಿರಾರ್ಥಿಗಳಾದಂತಹ ದೀಕ್ಷಿತ್ ಹಾಗೂ ಸುಶ್ಮಿತಾ ನೆರೆವೇರಿಸಿಕೊಟ್ಟರು. ಶಿಬಿರಾರ್ಥಿ ದೀಕ್ಷಿತ ವಂದಿಸಿದರು.


ಏಳು ದಿನದ ವಾರ್ಷಿಕ ವಿಶೇಷ ಶಿಬಿರ ನಡೆಯುವುದಕ್ಕೆ ಅನುವು ಮಾಡಿಕೊಟ್ಟಂತಹ ಸರಕಾರಿ ಪ್ರೌಢಶಾಲೆ ಕಲ್ಮಂಜದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪೂರ್ಣಿಮಾ ಇವರಿಗೆ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಕಿರುಕಾಣಿಕೆಯನ್ನು ಪ್ರೀತಿತಾ ಧರ್ಮವಿಜೇತ್ ಇವರಿಂದ ಹಸ್ತಾಂತರಿಸಲಾಯಿತು. ಹಿರಿಯ ಶಿಬಿರಾರ್ಥಿಗಳಿಂದ ಸರಕಾರಿ ಪ್ರೌಢಶಾಲೆ ಕಲ್ಮಂಜದ ವಿದ್ಯಾರ್ಥಿಗಳಿಗೆ ವಿವಿಧ ಮನರಂಜನಾ ಚಟುವಟಿಕೆ ಹಮ್ಮಿಕೊಂಡಿದ್ದರು.

Related posts

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ