24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜು ಮತ್ತು ಅಗಸ್ತ್ಯ ಅಂತರಾಷ್ಟ್ರೀಯ ಫೌಂಡೇಶನ್, ಬೆಂಗಳೂರು ಸಹಯೋಗದಲ್ಲಿ “ಮಿನಿ-ಅನ್ವೇಷಣಾ-2024 Present your Innovative Ideas”  ಕಾರ್ಯಕ್ರಮವನ್ನು ಅ.18 ರಂದು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಈ ಅನ್ವೇಷಣಾ ಕಾರ್ಯಕ್ರಮದಲ್ಲಿ ಒಟ್ಟು ೧೮೦ ವಿದ್ಯಾರ್ಥಿಗಳು 45 ತಂಡಗಳಾಗಿ ಭಾಗವಹಿಸಿದರು. ವಿವಿಧ ಸಮಸ್ಯೆಗಳಿಗೆ ತಂತ್ರಜ್ಞಾನದ ಅಳವಡಿಕೆ ಮೂಲಕ ಪರಿಹಾರ ಕಂಡುಕೊಳ್ಳುವಲ್ಲಿ ವಿದ್ಯಾರ್ಥಿಗಳು ತಮ್ಮ ನವೀನ ಕಲ್ಪನೆಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಂಶುಪಾಲರಾದ ಡಾ. ಆಶೋಕ್ ಕುಮಾರ್, ಇಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥರಾದ ಡಾ. ಮಧುಸೂದನ ಮತ್ತು ನೇಮಕಾತಿ ಅಧಿಕಾರಿ ಡಾ. ಸುಬ್ರಮಣ್ಯ ತೋಳ್ಪಾಡಿತ್ತಾಯ ಉಪಸ್ಥಿತರಿದ್ದರು.

ಅಗಸ್ತ್ಯ ಫೌಂಡೇಶನ್‌ನ ಭಾಸ್ಕರ್, ಪ್ರೊಫೆಸರ್ ಡಾ. ಸಂದೀಪ್, MITE ಮೂಡಬಿದ್ರಿಯ ಅಸೋಸಿಯೇಟ್ ಪ್ರೊಫೆಸರ್ ಡಾ. ಶಿವರಾಮ್, ಕಾರ್ಯಕ್ರಮ ಸಂಯೋಜಕ ಡಾ. ಮೋಹನ್ ನಾಯ್ಕ ತೀರ್ಪುಗಾರರಾಗಿ ಸಹಕರಿಸಿದರು. ವಿಜೇತ ತಂಡಗಳಿಗೆ ಪ್ರಾಂಶುಪಾಲರು ನಗದು ಬಹುಮಾನ ವಿತರಿಸಿದರು.

ಡಾ. ಆಶೋಕ್ ಕುಮಾರ್
ಪ್ರಾಂಶುಪಾಲರು

Related posts

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya
error: Content is protected !!