23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪದವಿ ಪ್ರದಾನ ಸಮಾರಂಭ

ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ 2023- 24ನೇ ಸಾಲಿನ ಪದವಿ ಪ್ರದಾನ ಸಮಾರಂಭವು ಅ.26ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಎಸ್‌ಡಿಎಂ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಡಾ|| ಡಿ. ವೀರೇಂದ್ರ ಹೆಗ್ಗಡೆ ಯವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಮಾಹಿತಿಗಳನ್ನು ತಿಳಿದುಕೊಂಡಾಗ ಮಾತ್ರ ವ್ಯಕ್ತಿತ್ವವನ್ನು ರೂಪಿಸುವುದಕ್ಕೆ ಸಾಧ್ಯ. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಕೂಡ ವೇದಿಕೆಯಲ್ಲಿ ಕೂರುವಂತಹ ಖ್ಯಾತಿಯನ್ನು ಪಡೆಯಲಿ ಎಂದು ಪದವಿಯನ್ನು ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಮುಖ್ಯ ಅಭ್ಯಾಗತರಾಗಿ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರು ಮತ್ತು ಗುಲ್ಬರ್ಗಾ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ. ಎಸ್ ಆರ್. ನಿರಂಜನ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಪಿ.ಎಲ್. ಧರ್ಮ ಭಾಗವಹಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಎಸ್‌ಡಿಎಂ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್., ಎಸ್‌ಡಿಎಂ ಎಜ್ಯುಕೇಶನ್ ಸೊಸೈಟಿಯ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್, ಸ್ನಾತಕೋತ್ತರ ಅಧ್ಯಯನದ ಡೀನ್ ಪ್ರೊ. ವಿಶ್ವನಾಥ ಪಿ, ಉಪನ್ಯಾಸಕರಾದ ನಂದ ಕುಮಾರಿ, ಜಿ. ಆರ್. ಭಟ್, ಸವಿತಾ ಕುಮಾರಿ, ಶಕುಂತಲಾ, ಸುವೀರ್ ಜೈನ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಸ್ವಾಗತಿಸಿದರು. ಉಪನ್ಯಾಸಕಿ ಶಲೀಫ ವಂದಿಸಿದರು.

Related posts

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya
error: Content is protected !!