32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನ ಮಿತ್ತಬಾಗಿಲು ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ಸ್ ಸೆಂಟರ್ ಪುತ್ತೂರು ಇದರ ಸಹಯೋಗದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಹದಿನೈದು ದಿನಗಳ ಕಾಲ ನಡೆಯಿತು.

ಸಭಾಧ್ಯಕ್ಷತೆಯನ್ನು ದೇವಾಲಯದ ಆಡಳಿತಾಧಿಕಾರಿ ಮೋಹನ್ ಬಂಗೇರರವರು ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಮಿತ್ತಬಾಗಿಲು ಗ್ರಾಮದ ಗ್ರಾಮಕರಣಿರಾದ ಸಂತೋಷ್ ಹಾಗೂ ಸ್ಥಳೀಯರಾದ ಮೋಹನ್ ಪೂಜಾರಿ ಕಿಲ್ಲೂರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕಂಪಾನಿಯೋ ಮುಖ್ಯಸ್ಥರಾದ ಪ್ರಭಾಕರ ಸಾಲಿಯಾನ್, ಸಿಬಂದಿಗಳಾದ ಕಾವ್ಯ, ಜ್ಯೋತಿ, ದಿವಾಕರ ಸಾಲಿಯಾನ್ ಇವರುಗಳನ್ನು ಶಾಲು ಹಾಕಿ ಫಲ ಪುಷ್ಪವನ್ನಿತ್ತು ಗೌರವಿಸಲಾಯಿತು. ಶಿಬಿರದಲ್ಲಿ ಮುನ್ನೂರಕ್ಕಿಂತಲೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದರು. ಸ್ಥಳೀಯರಾದ ಶ್ರೀಮತಿ ಮಲ್ಲಿಕಾರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಅತಿಥಿ ಹಾಗೂ ಶಿಬಿರಾರ್ಥಿಗಳನ್ನು ನೇಮಿರಾಜ್ ಕಿಲ್ಲೂರು ಸ್ವಾಗತಿಸಿದರು. ಕೇಶವ ಪಡ್ಕೆಯವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya
error: Content is protected !!