April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆಯು ಅ.27 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜಯಂತ ಶೆಟ್ಟಿ ಮಡಂತ್ಯಾರು ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯದರ್ಶಿ ಸುರೇಶ್ ಶೆಟ್ಟಿ ವರದಿ ವಾಚಿಸಿ ಸದಸ್ಯತನ ಅರ್ಜಿಗಳ ವಿವರವನ್ನು ಸಭೆಯ ಮುಂದಿಟ್ಟರು. ಸಂಘದ ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ದ ತಿಂಗಳ ಲೆಕ್ಕಪತ್ರವನ್ನು ಮಂಡಿಸಿದರು. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಲೆಕ್ಕಪತ್ರವನ್ನು, ವಿದ್ಯಾನಿಧಿ ಸಂಚಾಲಕರಾದ ಅಜಿತ್. ಜಿ. ಶೆಟ್ಟಿ. ಮಂಡಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಮಹಿಳಾ ವಿಭಾಗ ಮತ್ತು ಯುವ ವಿಭಾಗದ ವತಿಯಿಂದ ನಡೆಯುವ ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಂಘದ ಮಾಜಿ ಅಧ್ಯಕ್ಷ ಟಿ. ಆರ್. ಅಡ್ಯಂತಾಯ ಬಿಡುಗಡೆಗೊಳಿಸಿದರು.

ವಲಯ ಸಮಿತಿ ಹಾಗೂ ಗ್ರಾಮ ಸಮಿತಿಗಳ ಸಂಘಟನೆಯ ಬಗ್ಗೆ ಸಂಘಟನಾ ಸಂಚಾಲಕರಾದ ರಘುರಾಮ್ ಶೆಟ್ಟಿ ಸಾದನ ಸಭೆಗೆ ವಿವರ ನೀಡಿದರು. ಉಪಾಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ ಸ್ವಾಗತಿಸಿದರು. ಸಂಘದ ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಧನ್ಯವಾದ ನೀಡಿದರು.

Related posts

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya
error: Content is protected !!