April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

ಬೆಳ್ತಂಗಡಿ: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಬಂಟರ ವಿಭಾಗ ಹಾಗೂ ಯುವ ಬಂಟರ ವಿಭಾಗ ಆಶ್ರಯದಲ್ಲಿ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಾಚರಣೆ ಪ್ರಯುಕ್ತ “ಬಂಟೆರೆ ತುಡರ್ ಪರ್ಬ” ನ.3ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಲಿದೆ.

ಅಪರಾಹ್ನ ಗಂಟೆ 3.00ಕ್ಕೆ ದೀಪ ಪ್ರಜ್ವಲನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷರು ಶ್ರೀಮತಿ ಶಾರದಾ ರೈ ಕಣಿಯೂರು ನೆರವೇರಿಸಲಿದ್ದಾರೆ. ಅಪರಾಹ್ನ ಗಂಟೆ 3.15ರಿಂದ ಬಂಟರ ಮಹಿಳಾ ವಿಭಾಗದ ಸದಸ್ಯರಿಂದ ಭಜನಾ ಕಾರ್ಯಕ್ರಮ, ಸಂಜೆ ಗಂಟೆ 4.30ಕ್ಕೆ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಮಹಿಳಾ ವಿಭಾಗ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ ಎನ್. ಸಾಮಾನಿ, ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಂಗಳೂರು ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ। ಆಶಾಜ್ಯೋತಿ ರೈ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಬೆಂಗಳೂರು ಕ್ವಾರಿ ಸ್ಟೋನ್ ಕ್ರಶರ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಡಾ| ರವೀಂದ್ರ ಶೆಟ್ಟಿ ಬಜಗೋಳಿ ಭಾಗವಹಿಸಲಿದ್ದಾರೆ.

ಸಂಜೆ ಗಂಟೆ 5.30ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾತ್ರಿ ಗಂಟೆ 7.00ರಿಂದ ದೀಪಾರಾಧನೆ, ಗೋಪೂಜೆ, ಬಲಿಯೇಂದ್ರ ಪೂಜೆ, ಸುಡುಮದ್ದು ಪ್ರದರ್ಶನ ಮತ್ತು ಸಹಭೋಜನ ನಡೆಯಲಿದೆ,

Related posts

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya
error: Content is protected !!