ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ತೆಂಕಕಾರಂದೂರು: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಅಂಗವಾಗಿ, ಗ್ರಾಮ ಪಂಚಾಯತ್ ಬಳಂಜ, ಹಳೆ ವಿದ್ಯಾರ್ಥಿ ಸಂಘ ಪೆರೋಡಿತ್ತಾಯಕಟ್ಟೆ, ಮೀಡಿಯಾ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಪೆರೋಡಿತ್ತಾಯಕಟ್ಟೆಯಲ್ಲಿ ಬ್ರಹತ್ ರಕ್ತದಾನ ಶಿಬಿರ ನಡೆಯಿತು.

ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಾಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರಕ್ತದಾನ ಶಿಬಿರ ಉದ್ಘಾಟಿಸಿದರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ವೇದಿಕೆಯಲ್ಲಿ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಂ ಜನಾರ್ಧನ್, ಮಾರುತಿ ಕಾಂಪ್ಲೆಕ್ಸ್ ಕಟ್ಟಡ ಮಾಲಕರಾದ ವಿಠಲ ಹೆಗ್ಡೆ, ಬಳಂಜ ಗ್ರಾ.ಪಂ ಅಧ್ಯಕ್ಷೆ ಶೋಭಾ ಕುಲಾಲ್,ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷ ಜನಾರ್ಧನ, ಪೆರೋಡಿತ್ತಾಯಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಅರ್ಕಕೀರ್ತಿ ಹೆಗ್ಡೆ,ಶಿರ್ಲಾಲು ಸಿಎ ಬ್ಯಾಂಕ್ ಅಧ್ಯಕ್ಷ ನವಿನ್ ಕೆ ಸಾಮಾನಿ, ಅಳದಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಬಳಂಜ ಗ್ರಾ.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನೇಸರ, ಶಾಲಾ ಮುಖ್ಯೋಪಾಧ್ಯಾಯರಾದ ಬೆನೆಡಿಕ್ಟ್, ಅಳದಂಗಡಿ ಸಿಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ, ವಿಶ್ವನಾಥ ಹೊಳ್ಳ, ಕೊರಗಪ್ಪ, ಹೇಮಂತ್, ದೇವಿಪ್ರಸಾದ್ ಶೆಟ್ಟಿ, ದಿನೇಶ್ ಪಿ‌ಕೆ, ದೇಜಪ್ಪ ಪೂಜಾರಿ, ಧರ್ಣಪ್ಪ, ಶ್ರೀಮತಿ ಸುಂದರಿ, ಶ್ರೀಮತಿ ಮಮತಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ನಿರ್ದೇಶಕ ವಿಶ್ವನಾಥ ಹೊಳ್ಳ ಸ್ವಾಗತಿಸಿದರು.ಚಂದ್ರಹಾಸ್ ಬಳಂಜ ಕಾರ್ಯಕ್ರಮ ನಿರೂಪಿಸಿದರು.ಸಿಎ ಬ್ಯಾಂಕಿನ ಸಿಬ್ಬಂದಿಗಳಾದ ಸತೀಶ್ ಕೆ,ಭರತ್ ರಾಜ್, ಪ್ರಶಾಂತ್, ಜಗದೀಶ್, ಸಂತೋಷ್, ಮಮತಾ, ಶ್ರೀದೇವಿ, ಯತೀಶ್, ಹರೀಶ್, ಪ್ರವೀಣ್, ದಿನೇಶ್, ಡೀಕಯ್ಯ ಸಹಕರಿಸಿದರು.
ಚಿತ್ರ: ನೇಸರ ಕಟ್ಟೆ

Leave a Comment

error: Content is protected !!