23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಬಂಟರ ಸಂಘದ ಸಮಾಲೋಚನೆ ಸಭೆ ಹಾಗೂ ಗ್ರಾಮ ಸಮಿತಿ ರಚನೆ

ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಬಂಟರ ಸಂಘದ ಸಮಾಲೋಚನಾ ಸಭೆ ಹಾಗೂ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಅ. 27 ರಂದು ಓಡಿಲ್ನಾಳ ಕುಂಡಳಿಕೆ ವಿಠಲ ಶೆಟ್ಟಿ ಅವರ ಮನೆಯಲ್ಲಿ ನಡೆಯಿತು.


ಮುಖ್ಯ ಅತಿಥಿ ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಮಾತನಾಡಿ ನಮ್ಮ ಬಂಟ ಸಮುದಾಯದ ಪ್ರತಿಯೊಂದು ಮನೆಯ ಸದಸ್ಯರು ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಬಂಟ ಸಮುದಾಯದ ಯುವ ಪೀಳಿಗೆಗೆ ಉತ್ತಮ ವಿದ್ಯೆ, ಸಂಸ್ಕೃತಿ, ಸಂಸ್ಕಾರಗಳ, ಆಚರಣೆ ಬಗ್ಗೆ ಪೋಷಕರು ತಿಳಿಸಿ ಕೊಡುವ ಮೂಲಕ ಸಂಘಟನೆಯನ್ನು ಬಲಪಡಿಸಬೇಕು ಎಂದು ಹೇಳಿದರು.


ಓಡಿಲ್ನಾಳ ಬಂಟರ ಸಂಘದ ಸ್ಥಾಪಕ ಮಾಜಿ ಅಧ್ಯಕ್ಷ ಬಾಲಕೃಷ್ಣ ಪೂಂಜ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿ ಸುರೇಶ್ ಶೆಟ್ಟಿ ಲಾಯಿಲ, ನವೀನ್ ಸಾಮಾನಿ ಕರಂಬಾರು, ಜಯರಾಮ ಭಂಡಾರಿ, ಸೀತಾರಾಮ ಶೆಟ್ಟಿ ಕಂಬರ್ಜೆ, ಕಿರಣ್ ಶೆಟ್ಟಿ, ರಾಜು ಶೆಟ್ಟಿ ಬೆಂಗತ್ಯಾರು, ಅಜಿತ್ ಜಿ. ಶೆಟ್ಟಿ ಕೊರಿಯಾರು ಉಪಸ್ಥಿತರಿದ್ದು ಸಲಹೆಗಳನ್ನು ನೀಡಿದರು.

ಈ ವೇಳೆ ನೂತನ ಸಮಿತಿ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಸಂಬೋಳ್ಯ, ಕಾರ್ಯದರ್ಶಿ ಪುರಂದರ ಶೆಟ್ಟಿ. ಮುಂಗೇಲು, ಕೋಶಾಧಿಕಾರಿ ಅಭಿರತ್ ಶೆಟ್ಟಿ ಮುಡೈಲು, ಮಹಿಳಾ ಸಂಘದ ಉಪಾಧ್ಯಕ್ಷೆ ರಂಜಿತಾ ವಿ. ಶೆಟ್ಟಿ. ಮೈರಳಿಕೆ, ಕಾರ್ಯದರ್ಶಿ ವನಿತಾ ಜೆ.ಶೆಟ್ಟಿ ಅವರು ನೂತನ ಸಮಿತಿಗೆ ಅವಿರೋಧವಾಗಿ ಆಯ್ಕೆಯಾದರು.

ಪ್ರಭಾಕರ ಶೆಟ್ಟಿ ಉಪ್ಪಡ್ಕ ಪ್ಕಸ್ತಾವಿಕವಾಗಿ ಮಾತನಾಡಿದರು. ಸಹ ಸಂಚಾಲಕ ಸತೀಶ್ ಶೆಟ್ಟಿ ಕುಂಇ್ ಲೊಟ್ಟು, ನಿಕಟ ಪೂರ್ವ ಅಧ್ಯಕ್ಷ ವಸಂತ ಶೆಟ್ಟಿ ಮಠ, ಬೆಳ್ತಂಗಡಿ ಬಂಟರ ಸಂಘದ ಪದಾಧಿಕಾರಿಗಳು ಹಾಗೂ ಓಡಿಲ್ನಾಳ ಬಂಟ ಸಮುದಾಯದ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕು.ಮಿಥಿಲ, ಕು.ನಿವೇದಿತಾ, ಕು.ಕೃತಿಕಾ ಪ್ರಾರ್ಥನೆ ಹಾಡಿದರು. ಆನಂದ ಶೆಟ್ಟಿ ಐಸಿರಿ ಸ್ವಾಗತಿಸಿದರು. ವಿಠ್ಠಲ ಶೆಟ್ಟಿ ಉಪ್ಪಡ್ಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ಹಾಗೂ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya
error: Content is protected !!