24 C
ಪುತ್ತೂರು, ಬೆಳ್ತಂಗಡಿ
April 3, 2025
ಪ್ರಮುಖ ಸುದ್ದಿ

ಕುತ್ಲೂರು ಉನ್ನತಿಕರಿಸೀದ ಸ.ಹಿ.ಪ್ರಾ ಶಾಲಾ ಮಕ್ಕಳಿಗೆಊಟದ ಸ್ಟೀಲ್ ತಟ್ಟೆ ಹಾಗೂ ಕಪಾಟು ವಿತರಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗಿರುವ ಕುತ್ಲೂರು ಉನ್ನತಿಕರಿಸೀದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ನಡೆಯಿತು.

ಇದೇ ವೇಳೆ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಊಟದ ತಟ್ಟೆ ವಿತರಿಸಲಾಯಿತು.ಸಮೃದ್ದಿ ಎಂಟರ್ಪ್ರೈಸಸ್ ಮಾಲೀಕರಾದ ಕಾಲೀ೦ ಅವರು ಶಾಲೆಗೆ ಕಪಾಟು ಹಸ್ತಾಂತರಿಸಿದರು.ಶಾಲಾ ವಿದ್ಯಾರ್ಥಿಗಳು ಹಣತೆಯೊಂದಿಗೆ ದೀಪಾವಳಿ ಆಚರಿಸಿದರು

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕುತ್ಲೂರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಬಳಿಕ ಈ ಗ್ರಾಮ ಹಾಗೂ ಶಾಲೆ ಬಹಳ ಅಭಿವೃದ್ಧಿ ಕಂಡಿದೆ ಎಂದು ಹೇಳಿದರು. ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಜಿಲ್ಲಾ ಅಧ್ಯಕ್ಷ ಸಂತೋಷ್ ಕುಮಾರ್ ಕೊಲ್ಯ ಮಾತನಾಡಿ ಗ್ರಾಮೀಣ ಪ್ರದೇಶದ ಈ ಶಾಲೆ ಎಲ್ಲಾ ಶಾಲೆಗಳಿಗೆ ಮಾದರಿ ಯಾಗಿದೆ. ಈ ಶಾಲಾ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಕಾರ್ಯಕ್ರಮ ದಲ್ಲಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ದೀಪಕ್. ಜಿ, ಪದಾಧಿಕಾರಿಗಳಾದ ಶ್ರೀನಿವಾಸ್ ಕುಲಾಲ್, ಲಕ್ಷ್ಮಣ ಕೋಟ್ಯಾನ್,ವಿನೀತ್ ಬಂಗೇರ, ಸುಜಾತಾ ಸಾಲ್ಯಾನ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶ್ವೇತಾ

ಜಗದೀಶ್, ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಜ್ಯೋತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಮಿತ್ ಜೈನ್,, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮೀನಾ, ಶ್ರೀಮತಿ ಪ್ರೇಮ ಉಪಸ್ಥಿತರಿದ್ದರು . ಶ್ರೀಮತಿ ರೂಪ ಕುಮಾರಿ ವಂದಿಸಿದರು. ರಾಜಾಕಾಳಪ್ಪ ನವರು ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya
error: Content is protected !!