September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

ಬೆಳ್ತಂಗಡಿ: ಜೆಸಿಐ ಭಾರತದ ವಲಯ-15 ರ 2025 ನೇ ಸಾಲಿನ ನೂತನ ವಲಯ ಉಪಾಧ್ಯಕ್ಷರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ, ಮೈಟ್ ಇಂಜಿನಿಯರಿಂಗ್ ಕಾಲೇಜಿನ‌ ಅಸಿಸ್ಟೆಂಟ್ ಪ್ರೊಫೆಸರ್ ರಂಜಿತ್ ಹೆಚ್.ಡಿ ಬಳಂಜ ಅವರು ಆಯ್ಕೆಯಾದರು.

ಕಾಪುವಿನಲ್ಲಿ ನಡೆದ ವಲಯ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಂದಿನ ಸಾಲಿನ ಆಡಳಿತ ಮಂಡಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಯಿತು. ಈ ವರ್ಷ ಅದ್ಬುತ ಕಾರ್ಯಕ್ರಮಗಳ ಆಯೋಜನೆ ಮೂಲಕ ವಲಯದಲ್ಲಿಯೇ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿಯನ್ನು ರಂಜಿತ್ ಅವರು ತನ್ನದಾಗಿಸಿಕೊಂಡಿದ್ದರು. ಆದ್ದರಿಂದ ವಲಯ ಉಪಾಧ್ಯಕ್ಷ ಸ್ಥಾನಕ್ಕೆ ರಂಜಿತ್ ಅವರು ಅವಿರೋಧವಾಗಿ ಆಯ್ಕೆಯಾದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡು ವಲಯದಲ್ಲಿ ಹೆಚ್ಚು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.

Related posts

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya
error: Content is protected !!