ಮಂಗಳೂರು: ಮಂಗಳೂರಿನ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಇವರ ವತಿಯಿಂದ ರಾಷ್ಟ್ರ ಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಮ್.ಸಿ.ಎಫ್ ವತಿಯಿಂದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುತ್ಲೂರು ಇಲ್ಲಿನ ಮಕ್ಕಳಿಗೆ ಸುಮಾರು ಒಂದು ಲಕ್ಷ ರೂಪಾಯಿ ಬೆಲೆಬಾಳುವ ಸಮವಸ್ತ್ರವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ (IAS), ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್ (IPS), ಎಮ್.ಸಿ.ಎಫ್ ಅಧಿಕಾರಿಗಳು, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ, ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಸೇರಿದಂತೆ ಇತರ ಪತ್ರಕರ್ತರು, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾದ ರಾಮಕೃಷ್ಣ ಆರ್ ಮತ್ತು ಕುತ್ಲೂರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಮಚಂದ್ರ ಭಟ್ ಉಪಸ್ಥಿತರಿದ್ದರು.
ಕುತ್ಲೂರು ಗ್ರಾಮಸ್ಥರ ಪರವಾಗಿ ಹರೀಶ್ ಡಾಕಯ್ಯ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸುಂದರ್ ಕೋಟ್ಯಾನ್, ಸಂತೋಷ್ ಮೆಲ್ವಿನ್, ಸುಧಾಕರ, ಶಿಕ್ಷಕರಾದ ರಾಜು ಕಳಸಪ್ಪನವರ್, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.