September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವಾರ್ಪಣೆ

ಮಂಗಳೂರು: ಮಂಗಳೂರಿನ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಇವರ ವತಿಯಿಂದ ರಾಷ್ಟ್ರ ಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಮ್.ಸಿ.ಎಫ್ ವತಿಯಿಂದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುತ್ಲೂರು ಇಲ್ಲಿನ ಮಕ್ಕಳಿಗೆ ಸುಮಾರು ಒಂದು ಲಕ್ಷ ರೂಪಾಯಿ ಬೆಲೆಬಾಳುವ ಸಮವಸ್ತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ (IAS), ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್ (IPS), ಎಮ್.ಸಿ.ಎಫ್ ಅಧಿಕಾರಿಗಳು, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ‌ ಶ್ರೀನಿವಾಸ್ ನಾಯಕ್ ಇಂದಾಜೆ, ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಸೇರಿದಂತೆ ಇತರ ಪತ್ರಕರ್ತರು, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾದ ರಾಮಕೃಷ್ಣ ಆರ್ ಮತ್ತು ಕುತ್ಲೂರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಮಚಂದ್ರ ಭಟ್ ಉಪಸ್ಥಿತರಿದ್ದರು.

ಕುತ್ಲೂರು ಗ್ರಾಮಸ್ಥರ ಪರವಾಗಿ ಹರೀಶ್ ಡಾಕಯ್ಯ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸುಂದರ್ ಕೋಟ್ಯಾನ್, ಸಂತೋಷ್ ಮೆಲ್ವಿನ್, ಸುಧಾಕರ, ಶಿಕ್ಷಕರಾದ ರಾಜು ಕಳಸಪ್ಪನವರ್, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.

Related posts

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya
error: Content is protected !!