ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

ಬೆಳ್ತಂಗಡಿ : ಕಾಪುವಿನಲ್ಲಿ ನಡೆದ 2024ನೇ ಸಾಲಿನ ವಲಯ ಸಮ್ಮೇಳನ ದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ ರವರು ಜೆಸಿಐ ಭಾರತದ ಪ್ರತಿಷ್ಠಿತ ವಲಯ ಹದಿನೈದರ 2024 ನೇ ಸಾಲಿನ ಅತ್ಯುತಮ ಘಟಕಾಧ್ಯಕ್ಷ ಪ್ರಶಸ್ತಿಗೆ ಭಾಜನರಾದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 47ನೇ ಘಟಕಾಧ್ಯಕ್ಷರಾಗಿ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ ಪ್ರಸ್ತಕ ವರ್ಷದಲ್ಲಿ ಹಲವಾರು ತರಬೇತಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ತಾಲೂಕು ಹಾಗೂ ಜೆಸಿಐಯ ವಲಯ 15ರಲ್ಲಿ ಜೆಸಿಐ ಬೆಳ್ತಂಗಡಿಯನ್ನು ಮಿಂಚುವಂತೆ ಮಾಡಿದರು.

ವಲಯ 15ರ ವಲಯಾಧ್ಯಕ್ಷರಾದ ಅಡ್ವೋಕೇಟ್ ಗಿರೀಶ್ ಎಸ್ ಪಿ ಯವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪೂರ್ವ ವಲಯಾಧ್ಯಕ್ಷರಾದ ಸಂಪತ್ ಬಿ ಸುವರ್ಣ, ವಲಯ ಕಾರ್ಯದರ್ಶಿಗಳಾದ ಸೌಮ್ಯ ರಾಕೇಶ್, ವಲಯ ಉಪಾಧ್ಯಕ್ಷರಾದ ಶಂಕರ್ ರಾವ್, ಬೆಳ್ತಂಗಡಿ ಘಟಕದ ಪೂರ್ವಧ್ಯಕ್ಷರುಗಳಾದ ಚಿದಾನಂದ ಇಡ್ಯಾ, ಪ್ರಶಾಂತ್ ಲಾಯಿಲ, ಅಭಿನಂದನ್ ಹರೀಶ್ ಕುಮಾರ್, ಪ್ರಸಾದ್ ಬಿ ಎಸ್, ಉಪಾಧ್ಯಕ್ಷರುಗಳಾದ ಪ್ರೀತಮ್ ಶೆಟ್ಟಿ, ಆಶಾ ಪ್ರಶಾಂತ್, ಚಂದ್ರಹಾಸ್ ಬಳಂಜ, ಶೈಲೇಶ್, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಕಾರ್ಯದರ್ಶಿಗಳಾದ ಅನುದೀಪ್ ಜೈನ, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.

Related posts

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಸೈಂಟ್‌ ಮೇರಿಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಲೋಕಾರ್ಪಣೆ

Suddi Udaya
error: Content is protected !!