ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ಸರ್ವ ಧರ್ಮ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿತ್ತು.
ರೋವರ್ಸ್ ಮತ್ತು ರೇಂಜರ್ಸ್ ನ ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ಸರ್ವ ಧರ್ಮ ಪಾರ್ಥನೆಯನ್ನು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಮಾತನಾಡಿ ಪ್ರಾರ್ಥನೆ ಎನ್ನುವುದು ಸರ್ವರನ್ನೂ ಒಂದು ಗೂಡಿಸುವ ಒಂದು ಮಾಧ್ಯಮವಾಗಿದೆ. ಸರ್ವ ಧರ್ಮ ಪ್ರಾರ್ಥನೆ ಎಲ್ಲಾ ಧರ್ಮದವರನ್ನೂ ಸಮನಾಗಿ ಗೌರವಿಸುವ ಒಂದು ಅದ್ಭುತ ಕಾರ್ಯ. ಇಂತಹ ಮನೋಭಾವನೆಯನ್ನು ಸ್ಕೌಟ್ ಗೈಡ್ ವಿದ್ಯಾರ್ಥಿಗಳು ತಮ್ಮಲ್ಲಿ ಅಳವಡಿಸಿಕೊಳ್ಳಬೇಕು ಎಂದು ನುಡಿದರು.
ಸರ್ವಧರ್ಮ ಪ್ರಾರ್ಥನೆಯಲ್ಲಿ ಕಾಲೇಜಿನ ಉಪ ಪ್ರಾಚಾರ್ಯರದ ಡಾ. ರಾಜೇಶ್ ಬಿ, ಸಂಸ್ಕೃತ ಉಪನ್ಯಾಸಕ ಹಾಗೂ ಕಾಲೇಜಿನ ರಾಷ್ಟೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಪ್ರಸನ್ನ ಕುಮಾರ್ ಐತಾಳ್, ಕನ್ನಡ ಉಪನ್ಯಾಸಕ ಮಹಾವೀರ್ ಜೈನ್ ಉಪಸ್ಥಿತರಿದ್ದರು.
ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ದಳದ ನಾಯಕರಾದ ಲಕ್ಷ್ಮೀಶ್ ಭಟ್ ಮತ್ತು ಶ್ರೀಮತಿ ಅಂಕಿತಾ ಎಂ ಕೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.