25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

ಬೆಳ್ತಂಗಡಿ: ಅ.31ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ನೇತೃತ್ವದಲ್ಲಿ, ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಐದನೇ ವರ್ಷದ ದೋಸೆ ಹಬ್ಬವು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆ ಮುಖಂಡ, ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.


ಬಿಜೆಪಿ ಯುವಮೋರ್ಚಾದ ನೇತೃತ್ವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಕುಣಿತ ಭಜನೆ, ಗೋಪೂಜೆ, ಸುಡುಮದ್ದು ಪ್ರದರ್ಶನದೊಂದಿಗೆ ಸಂಭ್ರಮ- ಸಡಗರದಿಂದ ಕಾರ್ಯಕ್ರಮ ನಡೆಯಲಿದೆ.


ವಿಶೇಷ ಆಕರ್ಷಣೆ: ಬೆಳಿಗ್ಗೆಯಿಂದ ನಿರಂತರ ದೋಸೆ, ಕುಣಿತಾ ಭಜನೆ, ಹಣತೆ ಹಚ್ಚಿ ದೀಪಾವಳಿ ಆಚರಣೆ, ಗೋಪೂಜೆ ಉತ್ಸವ, ಸುಡುಮದ್ದು ಪ್ರದರ್ಶನ, ಭಜನೆ, ನಗರ ದೀಪಾಲಂಕಾರ, ಧಾರ್ಮಿಕ ಸಭಾ ಕಾರ್ಯಕ್ರಮ,ತೆಳಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ವಾಮಂಜೂರು, ಸಾಯಿ ಅಭಿನಯದ ತುಳು ಹಾಸ್ಯಮಯ ನಾಟಕ ಏರ್ಲಾ ಗ್ಯಾರಂಟಿ ಅತ್ತ್, ದ.ಕ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ- ೨೦೨೪, ಸರಿಗಮಪ ಖ್ಯಾತಿಯ ಕ್ಷಿತಿ ಕೆ. ರೈ ಹಾಗೂ ಅನ್ವಿತ್ ಕೊಡಗು ಇವರಿಂದ ಗಾನ ವೈಭವ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯಲಿದೆ.

Related posts

ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!