ಮಂಗಳೂರು : ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವೆನ್ಲಾಕ್ ಜಿಲ್ಲಾಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ವೆನ್ಲಾಕ್ ಜಿಲ್ಲಾಸ್ಪತ್ರೆಯ ಪಿಎಮ್- ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ 50 ಹಾಸಿಗೆಗಳ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸ ಸಮಾರಂಭವು ಅ.29 ರಂದು ಮಂಗಳೂರಿನ ಅತ್ತಾವರ ಐಎಂಎ ಭವನದಲ್ಲಿ ಮದ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾರತ ಸರಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶಿಲಾನ್ಯಾಸಗೈದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಪ್ರತಾಪ್ ಸಿಂಹ ನಾಯಕ್, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಮನೋಜ್ ಕುಮಾರ್, ಉಪ ಮಹಾಪೌರರು, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರರಾದ ಅಧ್ಯಕ್ಷ ಸದಾಶಿವ ಉಳ್ಳಾಲ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್. ಎಂ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ , ಮಂಗಳೂರು ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷರಾದ ಡಾ. ದುರ್ಗಾ ಪ್ರಸಾದ್ ಉಪಸ್ಮಿತರಿದ್ದರು.
ವೆನ್ಲಾಕ್ ಜಿಲ್ಲಾಸ್ಪತ್ರೆಯ ಅಧೀಕ್ಷಕರು ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಶಿವಪ್ರಕಾಶ್ ಡಿ.ಎಸ್. ಸ್ವಾಗತಿಸಿದರು. ಡಾ.ನವೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೆನ್ಲಾಕ್ ಆಸ್ಪತ್ರೆಯ ಆರ್.ಎಂ.ಓ ಡಾ.ಸುಧಾಕರ್ ಭಾಗವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಸರಕಾರದ ಅಧಿಕಾರೇತರ ವೆನ್ಲಾಕ್ ಆಸ್ಪತ್ರೆಯ ರಕ್ಷಾ ಸಮಿತಿಯ ಸದಸ್ಯರಾದ ಕೆ.ಎಂ.ಅಬ್ದುಲ್ ಕರೀಮ್ ಗೇರುಕಟ್ಟೆ, ಪದ್ಮನಾಭ ಅಮೀನ್, ಶಶಿಧರ ಬಜಾಲ್, ಅನಿಲ್ ಎನ್ ರಸ್ಕಿನ್ಹಾ, ಶ್ರೀಮತಿ ಪ್ರಮೀಳಾ ಈಶ್ವರ್, ಅಬ್ದುಲ್ ಸಲೀಮ್ ಭಾಗವಹಿಸಿದ್ದರು.