28 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

ಇಳಂತಿಲ ವಾಣಿನಗರದ ಶ್ರೀ ಕೇಶವ ಶಿಶು ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರೂ.1 ಲಕ್ಷ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆಯ ಯೋಜನಾಧಿಕಾರಿ ದಯಾನಂದ ಪೂಜಾರಿಯವರು ಸಮಿತಿಯ ಪದಾಧಿಕಾರಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಜನಾರ್ಧನ ಗೌಡ ಅಣ್ಣಾಜೆ, ಕಾರ್ಯದರ್ಶಿ ರವಿ ಇಳಂತಿಲ, ಸಮಿತಿಯ ಮಾಜಿ ಅಧ್ಯಕ್ಷ ಶಂಕರ ಭಟ್ ನಿಡ್ಡಾಜೆ ಇಳಂತಿಲ ಒಕ್ಕೂಟದ ಅಧ್ಯಕ್ಷ ಮೋಹನ ಶೆಟ್ಟಿ, ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ. ಕೆ ಸೇವಾಪ್ರತಿನಿಧಿ ವಸಂತಿ ಹಾಗೂ ಸಮಿತಿಯ ಸದಸ್ಯರು, ಶಿಶು ಮಂದಿರದ ಪುಟಾಣಿಗಳು ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ