24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

ಉಜಿರೆ: ದೇಶದ ಪ್ರತಿಷ್ಠಿತ ಯುಜಿಸಿಯು ನ್ಯಾಕ್ ಸಂಸ್ಥೆ ಮೂಲಕ ನಡೆಸುವ ಗುಣಮಟ್ಟ ಪರೀಕ್ಷೆಯಲ್ಲಿ ಸತತ ನಾಲ್ಕು ಬಾರಿ ಎ++ ಮಾನ್ಯತೆಯೊಂದಿಗೆ ರಾಜ್ಯದ, ದೇಶದ ಹಲವು ಪ್ರಶಸ್ತಿ, ಗೌರವಕ್ಕೆ ಭಾಜನವಾಗಿರುವ ಉಜಿರೆಯ ಎಸ್‌ಡಿಎಂ ಕಾಲೇಜಿಗೆ ಇನ್ನೆರಡು ಪ್ರಶಸ್ತಿಗಳು ಲಭಿಸಿವೆ.

ರಾಷ್ಟ್ರಮಟ್ಟದ ಬಿಗಿನಪ್ ರಿಸರ್ಚ್ ಇಂಟಲಿಜೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಉಜಿರೆ ಎಸ್‌ಡಿಎಂ ಕಾಲೇಜನ್ನು ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿಗೆ ಆಯ್ಕೆಮಾಡಿದ್ದು, ಅತ್ಯುತ್ತಮ ಆಡಳಿತ, ಗುಣಾತ್ಮಕ ಶಿಕ್ಷಣ ಹಾಗೂ ಸಾಮಾಜಿಕ ಕೊಡುಗೆಗೆ ನೀಡಲಾಗುವ ಪ್ರಶಸ್ತಿಗೆ ಕಾಲೇಜನ್ನು ಆಯ್ಕೆ ಮಾಡಿದೆ. ಜತೆಗೆ, ಶೈಕ್ಷಣಿಕ ಗುಣಮಟ್ಟದಲ್ಲಿ ಉತ್ಕೃಷ್ಟತೆ ಹಾಗೂ ಅದರ ಪರಿಣಾಮಕಾರಿ ಅಳವಡಿಕೆ ಅನುಷ್ಠಾನ ವಿಭಾಗದಲ್ಲಿಯೂ ಕಾಲೇಜನ್ನು ಪ್ರಶಸ್ತಿಗೆ ಪರಿಗಣಿಸಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಇಂಡಿಯಾ ಇಲೈಟ್ ಎಜುಕೇಶನ್ ಆ್ಯಂಡ್ ಇನ್‌ಸ್ಟಿಟ್ಯೂಷನಲ್ ಎಕ್ಸೆಲೆನ್ಸ್ ಅವಾರ್ಡ್ಸ್ ಆ್ಯಂಡ್ ಕಾನ್ಸರೆನ್ಸ್ 2024′ ಸಮಾರಂಭದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಬಿ.ಎ.ಕುಮಾರ ಹೆಗ್ಡೆ ಹಾಗೂ ವೈಸ್ ಪ್ರಿನ್ಸಿಪಾಲ್ ಎಸ್.ಎನ್‌. ಕಾಕತ್ಕರ್ ಪ್ರಶಸ್ತಿ ಸ್ವೀಕರಿಸಿದರು.

Related posts

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ ನಗರ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya
error: Content is protected !!