ಬೆಳ್ತಂಗಡಿ: ಕರ್ನಾಟಕ ಸಂಭ್ರಮ-50 ಅಭಿಯಾನದ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರುಗಳಿಗೆ 2024ನೇ ಸಾಲಿನಲ್ಲಿ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದು, 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(ಸುವರ್ಣ ಮಹೋತ್ಸವ ಪ್ರಶಸ್ತಿ) ಗೆ ಕೊಡುಗೈ ದಾನಿಗಳೂ, ಶ್ರೇಷ್ಠ ಉದ್ಯಮಿಯಾಗಿ ಸಹಸ್ರಾರು ಕುಟುಂಬಗಳಿಗೆ ಉದ್ಯೋಗದಾತರಾಗಿ, ಅನ್ನದಾತರಾಗಿ ತುಳುನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಭೂಪಟದಲ್ಲಿ ಮಿನುಗಿಸಿದ, ಮಾರ್ಗದರ್ಶಕರಾದ ಮಂಗಳೂರು ಕನ್ಯಾನ ಸದಾಶಿವ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.
