30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

ಧರ್ಮಸ್ಥಳ: ಸುಮಾರು 37ವರ್ಷದಿಂದ ವಿವಿಧ ಪಂಚಾಯತ್ ನಲ್ಲಿ ಸೇವೆ ಸಲ್ಲಿಸಿ ಮತ್ತು ಇದೀಗ ಧರ್ಮಸ್ಥಳ ಗ್ರಾ.ಪಂ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಕೆ ರವರು ಅ.30ರಂದು ಸೇವಾ ನಿವೃತ್ತಿ ಹೊಂದಿದ್ದು ಇವರಿಗೆ ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿ ವತಿಯಿಂದ ಧರ್ಮಸ್ಥಳ ಕೃಷಿ ಪ್ತತಿನ ಸಹಕಾರಿ ಸಂಘದ ಅಟಲ್ ಜೀ ಸಭಾಂಗಣದಲ್ಲಿ ಬೀಳ್ಕೊಡುಗೆ ಸಮಾರಂಭವು ನಡೆಯಿತು.

ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷ ಶ್ರೀಮತಿ ವಿಮಲಾ ಪರಮೇಶ್ವರ್, ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಮೂಡಬಿದಿರೆ ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ, ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕ ಕಿಶೋರ್ ಪಿ., ವೀರು ಶೆಟ್ಟಿ ಧರ್ಮಸ್ಥಳ, ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಪ್ರೀತಮ್ ಉಪಸ್ಥಿತರಿದ್ದರು.

ಈ ವೇಳೆ ಧರ್ಮಸ್ಥಳ ಗ್ರಾಪಂ. ವತಿಯಿಂದ, ಧರ್ಮಸ್ಥಳ ಕ್ಷೇತ್ರದಿಂದ, ಅಭಿಮಾನಿಗಳಿಂದ, ಗ್ರಾ.ಪಂ. ಸಿಬ್ಬಂದಿಗಳ ವತಿಯಿಂದ ಸನ್ಮಾನಿಸಲಾಯಿತು. .

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾ.ಪಂ. ಸದಸ್ಯರು, ಸಿಬ್ಬಂದಿಗಳು, ಇಲಾಖಾ ಅಧಿಕಾರಿಗಳು, ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು ಉಪಸ್ಥಿತರಿದ್ದರು.

ಶ್ರೀ ಧ.ಮಂ. ಪ್ರೌಢ ಶಾಲಾ ಮಕ್ಕಳು ಪ್ರಾರ್ಥಿಸಿ, ಪ್ರಭಾರ ಪಂ.ಅ. ಅಧಿಕಾರಿ ದಿನೇಶ್ ಸ್ವಾಗತಿಸಿದರು. ಚಂದ್ರಹಾಸ ಕೋಟ್ಯಾನ್ ಬಳಂಜ ಕಾರ್ಯಕ್ರಮ ನಿರೂಪಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಪ್ರಸ್ತಾವಿಕ ಮಾತನಾಡಿದರು.



Related posts

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!