ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ಸಂಗೀತ, ನೃತ್ಯ, ಕಲಾ ಪ್ರಕಾರಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಸೃಜನಶೀಲರಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ನ ಕಾರ್ಯದರ್ಶಿಗಳಾದ ಸಂದೀಪ್ ರಾವ್ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿದಾಗ ಸರ್ವೋತಮುಖ ಏಳಿಗೆಯೊಂದಿಗೆ ನೆಮ್ಮದಿಯ ಜೀವನವನ್ನು ಕಂಡುಕೊಳ್ಳಲು ಸಾಧ್ಯ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಎನ್ ಕೆ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದರು.


ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಸ್ವಾಗತಿಸಿದರು. ಸಾಂಸ್ಕೃತಿಕ ಸಂಯೋಜಕರಾದ ಮಹಾಬಲ ಗೌಡ ಧನ್ಯವಾದವಿತ್ತರು. ಶ್ರೀಮತಿ ಪ್ರಜ್ವಲ ಡಿ ಆರ್ ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!