24.4 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಕನ್ನಡ ರಾಜೋತ್ಸವದ ಅಂಗವಾಗಿ ನೀಡಲಾಗುವ 2024ನೇ ಸಾಲಿನ ರಾಜ್ಯ ರಾಜೋತ್ಸವ ಪ್ರಶಸ್ತಿಗೆ ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನ ಟ್ರಸ್ಟ್‌ನಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಸೀತಾರಾಮ ತೋಳ್ಪಾಡಿತ್ತಾಯ ಅವರು ಆಯ್ಕೆಯಾಗಿದ್ದಾರೆ.

ಧರ್ಮಸ್ಥಳ ಗ್ರಾಮದ ‘ಹಸನ್ಮುಖಿ’ ಅಗ್ರಹಾರ ನಿವಾಸಿಯಾಗಿರುವ ಬಿ. ಸೀತಾರಾಮ ತೋಳ್ಪಾಡಿತ್ತಾಯ ಅವರು ಶ್ರೀ ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ತಂದೆಯವರು ಆ ಕಾಲದ ಉತ್ತಮ ಯಕ್ಷಗಾನ ಭಾಗವತರಾಗಿದ್ದರು. ಇದರಿಂದಾಗಿ ಯಕ್ಷಗಾನದತ್ತ ಆಕರ್ಷಿತರಾದ ತೋಳ್ಪಾಡಿತ್ತಾಯರು ಪ್ರಾಥಮಿಕ ಶಾಲೆಯಿಂದಲೇ ಯಕ್ಷಗಾನದಲ್ಲಿ ವೇಷಗಾರಿಕೆ ಹಾಗೂ ಹಿಮ್ಮೇಳನವನ್ನು ಕಲಿತ್ತಿದ್ದರು. ಕಾಲೇಜು ವಿದ್ಯಾರ್ಥಿಯಾಗಿದ್ದಾಗ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ಪ್ರಶಸ್ತಿಯನ್ನು ಪಡೆದ ಸಾಧನೆ ಇವರದು.
1972ರಲ್ಲಿ ಶ್ರೀ ಕ್ಷೇತ್ರದಲ್ಲಿ ಯಕ್ಷಗಾನ ಕಲಿಕಾ ಕೇಂದ್ರದ ವಿದ್ಯಾರ್ಥಿಯಾಗಿ ಕುರಿಯ ವಿಠಲ ಶಾಸ್ತ್ರಿ, ಮಾಂಬಾಡಿ ನಾರಾಯಣ ಭಾಗವತಂತಹ ಮಹಾನ್ ಗುರುಗಳಿಂದ ಯಕ್ಷಗಾನದ ನಾಟ್ಯ ಹಾಗೂ ಚೆಂಡೆ, ಮದ್ದಳೆ ವಾದನಗಳ ಹೆಚ್ಚಿನ ಅಧ್ಯಯನವನ್ನು ಮಾಡಿದ ಇವರು 1972- 73ರಿಂದ ಇಲ್ಲಿಯ ತನಕ ಕಳೆದ 45 ವರ್ಷಗಳಿಂದ ಯಕ್ಷಗಾನ ಬಯಲಾಟ ಹಾಗೂ ತಾಳಮದ್ದಳೆ ಕ್ಷೇತ್ರದಲ್ಲಿ ಚೆಂಡೆ-ಮದ್ದಳೆ ಶ್ರೇಷ್ಠ ಮಟ್ಟದ ಹಿಮ್ಮೇಳ ವಾದಕರಾಗಿ ಗುರುತಿಸಲ್ಪಟ್ಟಿದ್ದಾರೆ.
ಆಗ್ರಮಾನ್ಯ ಕಲಾವಿದರಾದ ನೆಡ್ಲೆ ನರಸಿಂಹ ಭಟ್ಟ, ಚಿಪ್ಪಾರು ಕೃಷ್ಣಯ್ಯ ಬಳ್ಳಾಲ್, ಮಾಂಬಾಡಿ ಸುಬ್ರಹ್ಮಣ್ಯ ಭಟ್, ಪದ್ಯಾಣ ಶಂಕರನಾರಾಯಣ ಭಟ್, ಲಕ್ಷ್ಮೀಶ ಅಮ್ಮಣ್ಣಾಯ, ಗೋಪಾಲಕೃಷ್ಣ ಕುರುಪ್, ಸೇರಿದಂತೆ ಹಿರಿಯ ಮದ್ಲೆಗಾರರ ಜೊತೆಗಾರಿಕೆ ಹಾಗೂ ಭಾಗವತರಾದ ಕಡತೋಕ ಮಂಜುನಾಥ ಭಾಗವತ, ದಾಮೋದರ ಮಂಡೆಚ್ಚ, ಬಲಿಪ ನಾರಾಯಣ ಭಾಗವತ, ಪದ್ಯಾಣ ಗಣಪತಿ ಭಟ್, ಪುತ್ತಿಗೆ ರಘುರಾಮ ಹೊಳ್ಳ, ದಿನೇಶ್ ಅಮ್ಮಣ್ಣಾಯ ಮೊದಲಾದ ಹಿರಿಯ ಭಾಗವತರ ತಿರುಗಾಟದ ಜೊತೆಗಾರಿಕೆ, ಕಿರಿಯರ ಜೊತೆ ಒಡನಾಟವನ್ನು ಹೊಂದಿದ್ದಾರೆ.


ಶ್ರೀ ಕ್ಷೇತ್ರ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ ತಿರುಗಾಟ, ಆಕಾಶವಾಣಿ ಹಾಗೂ ದೂರದರ್ಶನದಲ್ಲಿ ‘ಬಿ’ ಹೈ ಶ್ರೇಣಿಯ ಕಲಾವಿದ, ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಹಿಂದಿನ ರಾಷ್ಟ್ರಪತಿಯಾಗಿದ್ದ ಡಾ. ಶಂಕರದಯಾಳ್ ಶರ್ಮರ ಉಪಸ್ಥಿತಿಯಲ್ಲಿ ಪ್ರದರ್ಶನ, ಅಮಿತಾಬ್ ಬಚ್ಚನ್ ನೇತೃತ್ವದಲ್ಲಿ ಜರಗಿದ ‘ವಿಶ್ವಸುಂದರಿ’ ಸ್ಪರ್ಧೆಯ ಸಾಂಸ್ಕೃತಿಕ ಕಲಾಪದಲ್ಲಿ ಪ್ರದರ್ಶನ, ರಾಜಧಾನಿ ಬೆಂಗಳೂರಿನಲ್ಲಿ ಹಲವು ಮುಖ್ಯ ಮಂತ್ರಿಗಳ ಗೌರವ ಉಪಸ್ಥಿತಿಯಲ್ಲಿ ಪ್ರದರ್ಶನ, ಭಾರತದಾದ್ಯಂತ ಚೆನ್ನೈ, ಹೈದರಾಬಾದ್, ಭೋಪಾಲ್. ದೆಹಲಿ, ಮುಂಬಯಿ ಮೊದಲಾದ ಪ್ರಮುಖ ನಗರಗಳಲ್ಲಿ ಪ್ರದರ್ಶನ, ನೂರಕ್ಕೂ ಮಿಕ್ಕಿ ಧ್ವನಿ ಸುರುಳಿಗಳಲ್ಲಿ, ಸಿ.ಡಿ, ಡಿ.ವಿ.ಡಿಗಳಲ್ಲಿ ಭಾಗವಹಿಸುವಿಕೆ, ತೆಂಕು-ಬಡಗು ಜೋಡಾಟ ಹಾಗೂ ಕುಡಾಟಗಳಲ್ಲಿ ಭಾಗವಹಿಸಿ ಅನುಭವ, ಆನೇಕ ಯಕ್ಷಗಾನ ಆಟ, ಕೂಟ, ಗಾನ ವೈಭವ, ರೂಪಕಗಳಿಗೆ ನಿರ್ದೇಶನ ನೀಡಿದ ಅನುಭವವನ್ನು ಪಡೆದಿದ್ದಾರೆ. ಇವರನ್ನು ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಹತ್ಯಡ್ಕ ನಿವಾಸಿ ಯಮುನಾ ನಿಧನ

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ

Suddi Udaya
error: Content is protected !!