September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ಬಳಂಜ ಇದರ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟ ಸ್ಪರ್ಧೆಯಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪದಕಗಳನ್ನು ಗೆದ್ದಿರುತ್ತಾರೆ.

ಪ್ರಾಥಮಿಕ ಬಾಲಕರು ಹಾಗೂ 14 ವಯೋಮಾನದ ಬಾಲಕರು ಎರಡು ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿ ಪಡೆದಿರುತ್ತಾರೆ. 19 ಪದಕಗಳೊಂದಿಗೆ ಪ್ರೌಢ ಶಾಲಾ ವಿಭಾಗದಲ್ಲಿ ಅಫ್ಜಲ್, ಶ್ರೇಯಸ್, ರೌಶನ್ ಪ್ರಾಥಮಿಕ ವಿಭಾಗದಲ್ಲಿ ಸ್ವರ್ಣಿತ್, ಸ್ವರೂಪ್, ಅಖಿಲ್, ಶ್ರೇಯ ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಕರಾದ ವಸಂತ ಹೆಗ್ಡೆ ಹಾಗೂ ನಿಶ್ಚಿತ್ ಇವರು ತರಬೇತಿ ನೀಡಿರುತ್ತಾರೆ. ವಿಜೇತರನ್ನು ಶಾಲಾ ಸಂಚಾಲಕರು, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

Related posts

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ಮಾನ್ಸೂನ್ ಸೇಲ್’ – ಚಿನ್ನದ ಆಭರಣಗಳು 0%, VA/ಮೇಕಿಂಗ್ ನಲ್ಲಿ 100% ರಿಯಾಯಿತಿ

Suddi Udaya

ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya
error: Content is protected !!