23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ನೇತೃತ್ವದಲ್ಲಿ, ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಐದನೇ ವರ್ಷದ ದೋಸೆ ಹಬ್ಬ ಕಾರ್ಯಕ್ರಮಕ್ಕೆ ಇಂದು(ಅ.31) ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ರಾಜ್ಯ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ಪ್ರಮುಖರಾದ ಉಮೇಶ್ ಕುಲಾಲ್, ಜಯಪ್ರಕಾಶ್ ಕಡಮ್ಮಾಜೆ, ಪ್ರಮೋದ್ ಗೌಡ ಡಿಡುಪೆ, ವಿದ್ಯಾ ಶ್ರೀನಿವಾಸ್‌ ಗೌಡ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬಿಜೆಪಿಯ ಪ್ರಮುಖರು, ಶಕ್ತಿಕೇಂದ್ರದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಬೆಳಿಗ್ಗೆಯಿಂದ ನಿರಂತರ ದೋಸೆ, ಕುಣಿತಾ ಭಜನೆ, ಹಣತೆ ಹಚ್ಚಿ ದೀಪಾವಳಿ ಆಚರಣೆ, ಗೋಪೂಜೆ ಉತ್ಸವ, ಸುಡುಮದ್ದು ಪ್ರದರ್ಶನ, ಭಜನೆ, ನಗರ ದೀಪಾಲಂಕಾರ, ಧಾರ್ಮಿಕ ಸಭಾ ಕಾರ್ಯಕ್ರಮ,ತೆಳಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ವಾಮಂಜೂರು, ಸಾಯಿ ಅಭಿನಯದ ತುಳು ಹಾಸ್ಯಮಯ ನಾಟಕ ಏರ್ಲಾ ಗ್ಯಾರಂಟಿ ಅತ್ತ್, ದ.ಕ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ- 2024 ಸರಿಗಮಪ ಖ್ಯಾತಿಯ ಕ್ಷಿತಿ ಕೆ. ರೈ ಹಾಗೂ ಅನ್ವಿತ್ ಕೊಡಗು ಇವರಿಂದ ಗಾನ ವೈಭವ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯಲಿದೆ.

Related posts

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya
error: Content is protected !!