April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

ಅಳದಂಗಡಿ: ಸರ್ಕಾರಿ ಪ್ರೌಢಶಾಲೆ ಅಳದಂಗಡಿ ಶಾಲೆಯಲ್ಲಿ ಅ.30 ರಂದು ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆಯು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷೀಯ ಸ್ಥಾನವನ್ನು ಸುರೇಂದ್ರ ಜೈನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ ಲಿಲ್ಲಿ ಮ್ಯಾಥ್ಯು ರವರು ಶೈಕ್ಷಣಿಕ ಪ್ರಗತಿಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. ಎಲ್ಲಾ ಶಿಕ್ಷಕರೂ ವಿದ್ಯಾಭ್ಯಾಸ ಪ್ರಗತಿ ಬಗ್ಗೆ ಸಲಹೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶ ವಿಶ್ಲೇಷಣೆ ತರಗತಿ ಶಿಕ್ಷಕರಿಂದ ಮಾಡಲಾಯಿತು.


ವಿದ್ಯಾರ್ಥಿ ಹಾಗೂ ಪೋಷಕರಿಗೆ ಮನೋಸ್ಥೈರ್ಯ ಮತ್ತು ಮಾದಕ ದ್ರವ್ಯ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಶಾಲಾ ಮುಖ್ಯ ಶಿಕ್ಷಕ ಶ್ರೀಮತಿ ಶಾಂತಿ ಮರಿಯಾ ಸಲ್ದಾನ ಕಾರ್ಯಕ್ರಮವನ್ನು ಉದ್ದೇಶಿಸಿ ಹಿತನುಡಿಯನ್ನಾಡಿದರು.

ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಸಮಾಜ ವಿಜ್ಞಾನ ಶಿಕ್ಷಕ ಚಂದ್ರಶೇಖರ್ ರಾವ್ ಕಾರ್ಯಕ್ರಮವನ್ನು ನಿರೂಪಿಸಿ, ಗಣಿತ ಶಿಕ್ಷಕರಾದ ಉಮೇಶ್ ಗೌಡ ವಂದಿಸಿದರು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya
error: Content is protected !!