July 23, 2026
Uncategorized

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ನಡ :ವಿದ್ಯಾಸಂಸ್ಥೆ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಯಲ್ಲಿ ನ.01 ಕನ್ನಡ ರಾಜ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಅಧ್ಯಕ್ಷರಾದ ಜನಾಬ್ ಸೈಯದ್ ಹಬೀಬ್ ಸಾಹೇಬ್ ಇವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿಯಾದ ಶ್ರೀಯುತ ಸೈಯದ್ ಅಯ್ಯುಬ್ , ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಮಾಡಿ ಮಾತನಾಡಿದ ಶ್ರೀಯುತ ಜನಾಬ್ ಸೈಯ್ಯದ್ ಹಬೀಬ್ ಸಾಹೇಬ್ ಇವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಮುಖ್ಯ ಅತಿಥಿಯಾದ ಸೈಯದ್ ಅಯ್ಯುಬ್ ಇವರು ಮಾತನಾಡಿ” ಕರ್ನಾಟಕದಲ್ಲಿ ದೊರೆಯುವ ನೈಸರ್ಗಿಕ ಸಂಪನ್ಮೂಲಗಳ ಸದ್ಭಳಕೆ ಹಾಗೂ ಸಾಮರಸ್ಯ ಜೀವನಕ್ಕೆ ಕರ್ನಾಟಕದ ಕೊಡುಗೆ ಅಪಾರ “ಎಂದರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀಮತಿ ಜಾಕಿನ್ ಬಿನ್ ಇವರು “ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ನಾಡಿನ ಸಂಸ್ಕೃತಿ ,ಪರಂಪರೆ ಹಾಗೂ ಆಚಾರ ವಿಚಾರಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದರು. ಶಾಲಾ ಸಹ ಶಿಕ್ಷಕಿ ರಾಬಿಯ ಇವರು ದ. ರಾ. ಬೇಂದ್ರೆಯವರ ಜೀವನಾಧಾರಿತ ಕಥೆಯನ್ನು ಹೇಳುವುದರ ಮೂಲಕ ಕನ್ನಡದ ಮಹತ್ವವನ್ನು ತಿಳಿಸಿಕೊಟ್ಟರು. ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳಿಂದ ಕನ್ನಡ ನಾಡಿನ ಸಂಸ್ಕೃತಿಯನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya
error: Content is protected !!