25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ, ನ.1: ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಧ್ವಜಾರೋಹಣವನ್ನು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ್ ಕನಿಕ್ಕಿಲ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಮಾತನಾಡಿ, ಸುಂದರ – ಸುಲಲಿತವಾದ ಕನ್ನಡ ಭಾಷೆಯನ್ನು ಮಾತನಾಡುತ್ತಾ ನಾವು ಕನ್ನಡಿಗರು ಎಂಬ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭವಾನಿ ಮಾರ್ಪಾಲು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ವೈಷ್ಣವಿ ಮತ್ತು ಸುಜನ್ ದಿನದ ಮಹತ್ವದ ಕುರಿತು ಮಾತನಾಡಿದರು.ವಿದ್ಯಾರ್ಥಿನಿ ತ್ರಿಷಾ ಜೈನ್ ಆಯ್ದ ಮಂಕುತಿಮ್ಮನ ಕಗ್ಗ ಮತ್ತು ತ್ರಿಪದಿಗಳನ್ನು ವಾಚಿಸಿದರು. ವಿದ್ಯಾರ್ಥಿಗಳಿಂದ ನಾಡಗೀತೆಗಳ ಗಾಯನ ನೆರವೇರಿತು.

ಕಾರ್ಯಕ್ರಮವನ್ನು ಕನ್ನಡ ಶಿಕ್ಷಕರಾದ ಸುಮನ್ ಯು ಎಸ್ ಇವರು ಸಂಯೋಜಿಸಿದರು. ವಿದ್ಯಾರ್ಥಿಗಳಾದ ಮೋಕ್ಷಿತಾ ಸ್ವಾಗತಿಸಿ , ನಿಶ್ಮಿತಾ ವಂದಿಸಿದರು‌. ಇಂದುಮತಿ ನಿರೂಪಿಸಿದರು.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya
error: Content is protected !!