25.3 C
ಪುತ್ತೂರು, ಬೆಳ್ತಂಗಡಿ
May 24, 2025
Uncategorized

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ನಾರಾವಿ :ಕರ್ನಾಟಕವು ವಿವಿಧ ಭಾಷೆ, ಕಲೆ, ಸಂಸ್ಕೃತಿಗಳ ತವರೂರು ಹಾಗೂ ಇಲ್ಲಿ ಕನ್ನಡ ಭಾಷೆಗಿರುವ ಸ್ಥಾನ ಮಹತ್ವದ್ದು.
ಕನ್ನಡ ಭಾಷೆಯನ್ನು ಉಳಿಸುವುದು, ಕರ್ಣಾಟಕದಲ್ಲಿನ ಸಂಸ್ಕೃತಿಯನ್ನು ಬೆಳೆಸುವುದು ಮನುಷ್ಯನ ಮೊದಲ ಧ್ಯೇಯವಾಗಿರಬೇಕು” ಎಂದು ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ ಸ್ವಾಮಿ ಜೆರೋಮ್ ಡಿ’ಸೋಜಾ ಹೇಳಿದರು. ಅವರು ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ಮಾತಾಡಿದರು. ದೇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು ನಂತರ ಧ್ವಜಾರೋಹಣವನ್ನು ಮಾಡಿ ರಾಷ್ಟ್ರ ಗೀತೆ ಹಾಗೂ ಕರ್ನಾಟಕದ ವೈಭವವನ್ನು ಸಾರುವ ನಾಡಗೀತೆಯನ್ನು ಹಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನುಆಚರಿಸಲಾಯಿತು.
ಪದವಿ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕರಾದ ಶ್ರೀ ದಿನೇಶ್ ಬಿಕೆ ಇವರು ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು.ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರು ಎಲ್ಲಾ ಮುಕ್ಯೋಪಾಧ್ಯಾಯರು ಅಧ್ಯಾಪಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಪದವಿ ಕಾಲೇಜಿನ ವಿದ್ಯಾರ್ಥಿನಿ ಕು.ಅನ್ವಿತಾ ರಾವ್ ಮಾಡಿದರು.ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚುವುದರ ಮೂಲಕ
ಕನ್ನಡ ರಾಜ್ಯೋತ್ಸವವನ್ನು ಸಂಭ್ರಮಿಸಲಾಯಿತು.

Related posts

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ – ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ರಾಮನವಮಿ ಉತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya
error: Content is protected !!