23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

ಕೊಕ್ಕಡ: ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅ.30 ರಂದು ದೀಪಾವಳಿ ಹಬ್ಬವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಕೆ. ಕೃಷ್ಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ, ದೀಪಾವಳಿ ಹಬ್ಬದ ವಿಶೇಷತೆಯ ಬಗ್ಗೆ ತಿಳಿಸಿದರು.

ಸಾಂಪ್ರದಾಯಿಕ ರೀತಿಯಲ್ಲಿ ಗೋ ಪೂಜೆಯನ್ನು ನಡೆಸಿ ಸನಿವಾಸಿಗಳಿಗೆ, ಫಲಾನುಭವಿಗಳಿಗೆ, ಆರೈಕೆದಾರರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ವಿಭಿನ್ನ ಚಟುವಟಿಕೆಗಳನ್ನು ಮಾಡಿ ಜೊತೆಗೆ ನೃತ್ಯ ಪ್ರದರ್ಶನವನ್ನು ನೀಡಿ ಎಲ್ಲರನ್ನು ಮನರಂಜಿಸಲಾಯಿತು.

ಸೇವಾಧಾಮದ ಫಲಾನುಭವಿ ಶೇಖರ್ ಬೈಪಾಡಿ ತಮ್ಮ ಮಗಳ ಹುಟ್ಟುಹಬ್ಬವನ್ನು ಈ ಸಂದರ್ಭದಲ್ಲಿ ಆಚರಿಸಿಕೊಂಡರು. ಹಣತೆಯನ್ನು ಹಚ್ಚಿ ಪಟಾಕಿಯನ್ನು ಸಿಡಿಸಿ ದೀಪಾವಳಿಯನ್ನು ಸಂಭ್ರಮಿಸಲಾಯಿತು.

ಸೇವಾಭಾರತಿ ಕನ್ಯಾಡಿ ಅಧ್ಯಕ್ಷರಾದ ಶ್ರೀಮತಿ ಸ್ವರ್ಣ ಗೌರಿ ನವೆಂಬರ್ 14ರಂದು ನೂತನ ಕಟ್ಟಡದ ಭೂಮಿ ಪೂಜೆ ಮತ್ತು ಶಿಲನ್ಯಾಸದ ಪ್ರತಿಯನ್ನು ನೀಡಿ ಎಲ್ಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ದಾನಿಗಳು, ಹಿತೈಷಿಗಳು, ಸಲಹಾ ಸಮಿತಿಯ ಸದಸ್ಯರು ಫಲಾನುಭವಿಗಳು, ಸನಿವಾಸಿಗಳು, ಆರೈಕೆದಾರರು, ಸ್ವಯಂಸೇವಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಡಾಕ್ಯುಮೆಂಟೇಶನ್ ಮೋಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಸ್ವಾಗತಿಸಿ, ನಿರೂಪಿಸಿದರು. ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಧನ್ಯವಾದವಿತ್ತರು.

Related posts

ಕನ್ಯಾಡಿ ಸರ್ಕಾರಿ ಶಾಲೆಯ ಪ್ರಾರಂಭೋತ್ಸವ

Suddi Udaya

ವಯೋ ನಿವೃತಿಯಾದ ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿ ಸುಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya
error: Content is protected !!