April 2, 2025
Uncategorized

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಯಲ್ಲಿ ನ.4 ರಿಂದ 9 ಕೆಪಿಎಸ್ ಶೈಕ್ಷಣಿಕ ಹಬ್ಬ-2024 : 5,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ : ಶಾಸಕ ಹರೀಶ್

ಬೆಳ್ತಂಗಡಿ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢ ಶಾಲಾ ವಿಭಾಗ, ಪ್ರಾಥಮಿಕ ಮತ್ತು ಕಾಲೇಜಿನ ನೇತೃತ್ವದಲ್ಲಿ ಊರವರ ಹಾಗೂ ದಾನಿಗಳ ಸಹಕಾರದೊಂದಿಗೆ ನ. 4 ರಿಂದ ನ.9 ವರೆಗೆ ಕೆಪಿಎಸ್ ಶೈಕ್ಷಣಿಕ ಹಬ್ಬ- 2024′ ಜರುಗಲಿದ್ದು, ಇದರಲ್ಲಿ5,500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ” ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ನ.3 ಭಾನುವಾರ ಬೆಳ್ತಂಗಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
“ನ.4 ಮತ್ತು 5ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಂತ್ಯಾರಿನ ವತಿಯಿಂದ ರೋವರ್-ರೇಂಜರ್ಸ್ ಸಮಾಗಮ, ಸ್ಕೌಟ್ಸ್-ಗೈಡ್ಸ್ ರಾಲಿ, ಕಬ್-ಬುಲ್ ಬುಲ್ ಉತ್ಸವ ನಡೆಯಲಿದೆ. ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ಕಬ್ – ಬುಲ್‌ ಬುಲ್‌ ಗಳಿಗೆ ಕರಕುಶಲ ವಸ್ತುಗಳ ತಯಾರಿ, ಧಾನ್ಯದಿಂದ ಅಕೃತಿ ರಚನೆ, ಪೇಪರ್ ಕ್ರಾಫ್ಟ್, ಪ್ರಾಣಿ- ಪಕ್ಷಿಗಳ ಚಿತ್ರ ರಚನೆ, ಅಭಿನಯ ಗೀತೆ, ಕಥೆ ಹೇಳುವುದು ಅದೇ ರೀತಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಧ್ವಜಸ್ತಂಭ ರಚನೆ, ಸುಧಾರಿತ ಗುಡಾರ ರಚನೆ,ಗ್ಯಾಜೆಟ್ ರಚನೆ, ಬೆಂಕಿ ಬಳಸದೆ ಅಡುಗೆ ತಯಾರಿ, ಬುಟ್ಟಿ, ಚಾಪೆ ತಯಾರಿ, ಗ್ರೀಟಿಂಗ್ ಕಾರ್ಡ್ ತಯಾರಿ, 2025ರ ಕ್ಯಾಲೆಂಡರ್ ತಯಾರಿ, ದೇಶಭಕ್ತಿ,ಭಾವೈಕ್ಯತಾ ಗೀತೆ, ಹೊರಸಂಚಾರ, ಶಿಬಿರಾಗ್ನಿ,ಸಾಹಸಮಯ ಚಟುವಟಕೆಗಳು,ಫ್ರೆಂಡ್ ಗೇಮ್, ಪಥಸಂಚಲನ, ನಗರ ಮೆರವಣಿಗೆ ಇತ್ಯಾದಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದರು.
” ನ.6ರಂದು ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ನಡೆಯಲಿದ್ದು, ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢ ವಿಭಾಗದಲ್ಲಿ ಸೇರಿ 48 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಈಗಾಗಲೇ ಕ್ಲಸ್ಟರ್ ಮಟ್ಟದಲ್ಲಿ ಈ ಸ್ಪರ್ಧೆಗಳು ನಡೆದು ಅಲ್ಲಿ ಪ್ರಥಮ ಸ್ಥಾನ ಪಡೆದ ಪ್ರಾಥಮಿಕ ಮತ್ತು ಮಾಧ್ಯಮಿಕ ವಿಭಾಗದ ವಿದ್ಯಾರ್ಥಿಗಳು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇಲ್ಲಿ ಕನ್ನಡ,ಇಂಗ್ಲೀಷ್, ಹಿಂದಿ ಕಂಠಪಾಠ ಸ್ಪರ್ಧೆ, ಧಾರ್ಮಿಕ ಪಠಣ ಸಂಸ್ಕೃತ ಮತ್ತು ಆರೇಬಿಕ್, ದೇಶಭಕ್ತಿ ಗೀತೆ, ಛದ್ಮವೇಷ, ಕಥೆ ಹೇಳುವುದು, ಚಿತ್ರಕಲೆ, ಅಭಿನಯಗೀತೆ, ಕ್ಲೇ- ಮಾಡಲಿಂಗ್, ಭಕ್ತಿಗೀತೆ, ಆಶುಭಾಷಣ, ಪ್ರಬಂಧ ರಚನೆ,ಕವನ,ಪದ್ಯ ವಾಚನ, ಮಿಮಿಕ್ರಿ ಹಾಗೂ ಪ್ರೌಢ ವಿಭಾಗದಲ್ಲಿ ಕನ್ನಡ, ಇಂಗ್ಲೀಷ್, ಹಿಂದಿ, ತುಳು, ಸಂಸ್ಕೃತ ಭಾಷಣ, ಧಾರ್ಮಿಕ ಪಠಣ ಸಂಸ್ಕೃತ ಮತ್ತು ಅರೇಬಿಕ್,ಜನಪದಗೀತೆ, ಭಾವಗೀತೆ, ಭರತನಾಟ್ಯ, ಪ್ರಬಂಧರಚನೆ, ಚಿತ್ರಕಲೆ, ಮಿಮಿಕ್ರಿ, ಚರ್ಚಾಸ್ಪರ್ಧೆ ಮೊದಲಾದ ಸ್ಪರ್ಧೆಗಳು ನಡೆಯಲಿದೆ.
ನ.7ರಂದು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಸಂಪನ್ನಗೊಳ್ಳಲಿದೆ.

ನ.8ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಭಾಷಣ, ಪ್ರಬಂಧ, ಚಿತ್ರಕಲೆ ಹಾಗೂ ಬದುಕು- ಬೆಳಕು ಎನ್ನುವ ಪುಸ್ತಕ ಆಧಾರಿತ ಕಂಠಪಾಠ ಸ್ಪರ್ಧೆ ನಡೆಯಲಿದೆ.
ನ.9ರಂದು ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.
ಕಾರ್ಯಕ್ರಮದಲ್ಲಿ ಸಂಸದರು, ಜಿಲ್ಲೆಯ ಶಾಸಕರು ಬೆಳ್ತಂಗಡಿ ತಾಲೂಕಿನ ಜನಪ್ರತಿನಿಧಿಗಳು, ದಾನಿಗಳು, ಶಿಕ್ಷಣ ಪ್ರೇಮಿಗಳು, ವಿದ್ಯಾರ್ಥಿಗಳು, ಪೋಷಕರು, ಊರ ಹಿರಿಯ-ಕಿರಿಯ ಬಂಧುಗಳು ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಕಂಗಿತ್ತಿಲು, ಪ್ರಧಾನ ಕಾರ್ಯದರ್ಶಿ,ಸಂಸ್ಥೆಯ ವೈಸ್ ಪ್ರಿನ್ಸಿಪಾಲ್ ಉದಯಕುಮಾರ್ ಬಿ., ಕೋಶಾಧಿಕಾರಿಯಾದ ಮೋಹನ್ ಸಾಲಿಯಾನ್, ಪ್ರಭಾರ ಬಿಇಒ ವೆಂಕಟೇಶ ತುಳುಪುಳೆ, ಶಿಕ್ಷಣ ಇಲಾಖೆಯ ಕರುಣಾಕರ,ಚೇತನಾಕ್ಷಿ, ಶಿಕ್ಷಕ ಧರಣೇಂದ್ರ ಕುಮಾರ್ ಉಪಸ್ಥಿತರಿದ್ದರು.

Related posts

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

Suddi Udaya

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya

ಬಂದಾರು : ‘ಅಕ್ಷರ ಸಿರಿ’ ಪ್ರಶಸ್ತಿ ಪುರಸ್ಕೃತ ದೈ.ಶಿ.ಶಿಕ್ಷಕ ಪ್ರಶಾಂತ್ ಸುವರ್ಣ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಸಮಾರಂಭ – ಪ್ರತಿಭಾ ಪುರಸ್ಕಾರ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya
error: Content is protected !!