23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

ಧರ್ಮಸ್ಥಳ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ದಂಪತಿಗಳ ಶವ ನ.3 ರಂದು ಪತ್ತೆಯಾಗಿದೆ. ಅ. 31 ರಂದು ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಶವ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ನ.3ರಂದು ಮಧ್ಯಾಹ್ನ ಕಂಡು ಬಂದಿದೆ.

ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಹಾಗೂ ಈಶ್ವರಮ್ಮ (52) ಎಂದು ಗುರುತಿಸಲಾಗಿದೆ.
ಅ.31 ರಂದು ದಂಪತಿಗಳು ನಾಪತ್ತೆಯಾಗಿದ್ದು, ಈ ಬಗ್ಗೆ ಅನುಮಾನಗೊಂಡ ಕುಟುಂಬಸ್ಥರು ಹುಡುಕಿಕೊಂಡು ಧರ್ಮಸ್ಥಳಕ್ಕೆ ಬಂದಿದ್ದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯದಲ್ಲಿ‌‌ ಶೌರ್ಯ ತಂಡ ಹಾಗೂ   ಪೊಲೀಸರ ಸಹಕಾರದಲ್ಲಿ  ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ನದಿಯಲ್ಲಿ ಹುಡುಕಾಡಿದಾಗ ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್ ನ ಅಣೆಕಟ್ಟಿನಲ್ಲಿ ಶವಗಳು ಸಿಲುಕಿಕೊಂಡಿದ್ದವು.

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಉಜಿರೆ, ವೇಣೂರು ತಂಡದವರು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ನ. 1ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ  ತಿಳಿದು ಬಂದಿಲ್ಲ.

Related posts

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Suddi Udaya
error: Content is protected !!