25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ವಿಶ್ವ ಮಾನವ ಸಂದೇಶವನ್ನು ಪಾಲಿಸಿ, 45 ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ, ಆರೋಗ್ಯ ಹಾಗೂ ಸಮಾಜಮುಖಿ ಸಾಧನೆ, ಸೇವೆಯನ್ನು ಮಾಡಿ, ಅದೇಷ್ಟೋ ಜನರ ಬದುಕಲ್ಲಿ ನೆಲೆ ನಿಂತ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜಕ್ಕೆ ಒಲಿದು ಬಂದ ಪ್ರತಿಷ್ಠಿತ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ – 2024ಕ್ಕೆ ಸಹಕರಿಸಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರನ್ನು ಅವರ ನಿವಾಸದಲ್ಲಿ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅದ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಮಾಜಿ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಹೆಚ್,ಎಸ್, ತಾಲೂಕು ಯುವ ಬಿಲ್ಲವ ವೇದಿಕೆ ಮಾಜಿ ಅಧ್ಯಕ್ಷ ರಂಜಿತ್ ಹೆಚ್.ಡಿ.ಸಂಘದ ನಿರ್ದೇಶಕರುಗಳಾದ ಯತೀಶ್ ವೈ.ಎಲ್, ರಂಜಿತ್ ಪೂಜಾರಿ ಮಜಲಡ್ಕ, ರಕ್ಷಿತ್ ಬಗ್ಯೋಟ್ಟು, ಸದಸ್ಯರಾದ ಸಂತೋಷ್ ಕುಮಾರ್ ಹಿಮರಡ್ಡ, ದಿನೇಶ್ ಪೂಜಾರಿ ನಿಟ್ಟಡ್ಕ ಮೊದಲಾದವರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya
error: Content is protected !!