27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

ಬೆಳ್ತಂಗಡಿ : ಭಜನಾ ಪರಿಷತ್ ಬೆಳ್ತಂಗಡಿ, ಕುಣಿತ ಭಜನಾ ತರಬೇತಿದಾರರ ಸಂಘ, ಬೆಳ್ತಂಗಡಿ ತಾ. ವಿವಿಧ ಹಿಂದೂ ಪರ ಸಂಘಟನೆಗಳ & ಭಜಕರ ಸಹಕಾರದಲ್ಲಿ ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ ಹಾಗೂ ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನ ಬಳಿಯಿಂದ ಖಂಡನಾ ಮೆರವಣಿಗೆ ಮತ್ತು ಬೆಳ್ತಂಗಡಿ ಆಡಳಿತ ಸೌದದ ಆವರಣದಲ್ಲಿ ಭಜಕರ ಸಮಾವೇಶವು ನ.4 ರಂದು ನಡೆಯಿತು.

ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಸುಬ್ರಹ್ಮಣ್ಯ ಅಗರ್ತ, ಧನಂಜಯ ರಾವ್ ಬಿ.ಕೆ, ಹಾಗೂ ರಾಷ್ಟ್ರ ಸೇವಿಕಾ ಸಮಿತಿಯ
ಶ್ರೀಮತಿ ಗಿರಿಜ ಭಟ್ ಮಾತನಾಡಿ, ಭಜಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ವೇದಿಕೆಯಲ್ಲಿ ಭಜನಾ ಪರಿಷತ್ ರಾಜ್ಯಾಧ್ಯಕ್ಷ ಚಂದ್ರಶೇಖರ್ ಪಿ ಸಾಲ್ಯಾನ್, ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ ಭಟ್ , ವಿ.ಹಿಂ. ಪರಿಷತ್‌ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ನ.ಪಂ ಅಧ್ಯಕ್ಷ ಜಯಾನಂದ ಗೌಡ, ಪ್ರಮುಖರಾದ ಭಾಸ್ಕರ್ ಧಮ೯ಸ್ಥಳ, ಸೀತಾರಾಮ ಬೆಳಾಲ್, ಕೊರಗಪ್ಪ ನಾಯ್ಕ, ಜಯಂತ್ ಗೌಡ, ಮಂಜುನಾಥ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಭಜನಾ ಪರಿಷತ್ ಉಪಾಧ್ಯಕ್ಷ ಜಯಪ್ರಕಾಶ್ ಕಡಮ್ಮಾಜೆ ಸ್ವಾಗತಿಸಿದರು. ಭಜನಾ ತರಬೇತಿ ಶಿಕ್ಷಕ ಹರೀಶ್ ನೆರಿಯ ಕಾರ್ಯಕ್ರಮ ನಿರೂಪಿಸಿದರು.

ಸಮಾವೇಶಕ್ಕೆ ಮೊದಲು ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ತಾಲೂಕು ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ವೇಳೆ ನೂರಾರು ಭಜಕರು ಸಮಾವೇಶದಲ್ಲಿ ಪಾಲ್ಗೊಂಡರು.

Related posts

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!