ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya

ಧರ್ಮಸ್ಥಳ : ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆಗಳು ಅಮೃತ ಭಾವನ ಸುಳ್ಯ ಇಲ್ಲಿ ಉದ್ಘಾಟನೆಗೊಂಡಿತು.

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೀತಲ್ ಯು ಕೆ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾದ್ಯಾಯಿನಿಯಾದ ಶ್ರೀಮತಿ ಸುನಂದ ಉದ್ಘಾಟಿಸಿದರು.

ಶಾಂತಿವನ ಟ್ರಸ್ಟಿನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ ಡಾ/ ಶಶಿಕಾಂತ್ ಜೈನ್ ಇವರು ಸ್ಪರ್ಧೆಯ ಯೋಜನೆ ಉದ್ದೇಶ ರೂಪುರೇಶೆಯ ಬಗ್ಗೆ ಮಾತನಾಡಿದರು. ತಾಲೂಕು ಯೋಗ ಸಂಘಟಕರಾದ ಶ್ರೀಮತಿ ಮಮತಾ ಮೂಡಿತ್ತಾಯ ಸ್ವಾಗತಿಸಿ ಯೋಗ ಶಿಕ್ಷಕರಾದ ವೆಂಕಟರಾಜ ಇವರು ವಂದಿಸಿದರು. ಶ್ರೀಮತಿ ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಣ ಸಂಯೋಜಕರಾದ ಶ್ರೀಮತಿ ಸಂಧ್ಯಾ ಹಾಗೂ ಶ್ರೀಮತಿ ಧನಲಕ್ಷ್ಮಿ ಮತ್ತು ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಮಮತಾ ಉಪಸ್ಥಿತರಿದ್ದರು.

Leave a Comment

error: Content is protected !!