September 6, 2026
Uncategorized

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

ಚಾರ್ಮಾಡಿ : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ಚಾರ್ಮಾಡಿ ವತಿಯಿಂದ ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ಪ್ರತಿಭಟನೆಯು ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ನ.5 ರಂದು ನಡೆಯಿತು.

ಈ ವೇಳೆ ಕಸ್ತೂರಿ ರಂಗನ್ ವರದಿಯನ್ನು ಕೈಬಿಡಬೇಕು ಎಂಬ ಮನವಿ ಹಾಗೂ ಆರು ಹೋರಾಟಗಾರರ ಬೇಡಿಕೆಗಳಾದ ಕಸ್ತೂರಿ ರಂಗನ್ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣ ಕೈಬಿಡಬೇಕು. ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಕೃಷಿ ಭೂಮಿಗೂ ಅರಣ್ಯ ಭೂಮಿಯ ನಡುವೆ ಆನೆ ಕಂದಕ ನಿರ್ಮಾಣವಾಗಬೇಕು. ಪಶ್ಚಿಮಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ, ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು. ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ನಡೆಯಬೇಕು. ರೈತರಿಗೆ ಕೋವಿ ಪರವಾನಿಗೆ ನೀಡಬೇಕು. ಪಶ್ಚಿಮಘಟ್ಟಕ್ಕೆ ಸಂಬಂಧಪಟ್ಟಂತೆ ಪರಿಸರ ಸಂರಕ್ಷಣೆಯ ತಜ್ಞರ ವರದಿ ತಯಾರಿಸುವಾಗ ಪಶ್ಚಿಮಘಟ್ಟ ಪ್ರದೇಶದ ಗ್ರಾಮ ಪಂಚಾಯತುಗಳಲ್ಲಿ ವ್ಯಾಪಕ ಪ್ರಚಾರ ನಡೆಸಿ ವಿಶೇಷ ಗ್ರಾಮಸಭೆ ಕರೆದು ಗ್ರಾಮಸ್ಥರ ಅಭಿಪ್ರಾಯವನ್ನು ಸಂಗ್ರಹಿಸಬೇಕು ಎಂಬ ಬೇಡಿಕೆಗಳನ್ನು ಪ್ರತಿಭಟಿಸಿ, ಗ್ರಾಮ ಮಟ್ಟದಲ್ಲಿ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಶಿರಾಡಿ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ, ಮಲೆನಾಡು ಹಿತರಕ್ಷಣಾ ವೇದಿಕೆಯ ಚಾರ್ಮಾಡಿ ಗ್ರಾಮ ಸಮಿತಿ ಸಂಚಾಲಕ ಕೃಷ್ಣ ರಾವ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ಎ., ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂ. ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya
error: Content is protected !!