38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

ಬೆಳ್ತಂಗಡಿ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕ್ಷೇತ್ರದ ನಿರ್ಮಾತೃ, ಮಾಜಿ ಕೇಂದ್ರ ಸಚಿವ, ಹಿರಿಯರಾದ ಬಿ ಜನಾರ್ಧನ‌ ಪೂಜಾರಿಯವರನ್ನು ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2024ರ ಪುರಸ್ಕೃತರಾದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಹಾಗೂ ಸದಸ್ಯರು ಭೇಟಿ ಮಾಡಿ ಅವರಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಮಾಜಿ ಅಧ್ಯಕ್ಷರಾದ ದಿನೇಶ್ ಪೂಜಾರಿ ಅಂತರ, ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್ ಸಾಲಿಯಾನ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಸಂಘದ ನಿರ್ದೇಶಕರಾದ ಯತೀಶ್ ವೈ ಎಲ್, ದಿನೇಶ್ ಪೂಜಾರಿ ನಿಟ್ಟಡ್ಕ, ರಂಜಿತ್ ಪೂಜಾರಿ ಮಜಲಡ್ಡ, ಸದಸ್ಯರಾದ ಚಂದ್ರಹಾಸ ಬಳಂಜ, ಶಿವಧ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

Suddi Udaya
error: Content is protected !!