24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

ಬೆಳ್ತಂಗಡಿ : ಕ್ಯಾನ್ಸರ್ ರೋಗದ ಬಗ್ಗೆ ನಿರ್ಲಕ್ಷ್ಯ ಮಾಡದೇ ಮೊದಲ ಹಂತದಲ್ಲಿಯೇ ಸೂಕ್ತ ತಜ್ಞ ವೈದ್ಯರಿಂದ ತಪಾಸಣೆ ನಡೆಸಿ ಉತ್ತಮ ಚಿಕಿತ್ಸೆ ಪಡೆದಾಗ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ. ಆತ್ಮವಿಶ್ವಾಸ, ಸಕಾರಾತ್ಮಕ ಆಲೋಚನೆ, ವ್ಯಾಯಾಮ ಹಾಗೂ ಪೌಷ್ಟಿಕ ಆಹಾರ ಸೇವನೆ ಮಾಡಿದಾಗ ಕ್ಯಾನ್ಸರ್ ಗೆಲ್ಲಬಹುದು ಎಂದು ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ. ಹೃತ್ವಿಕ್ ಅಭಿಪ್ರಾಯಪಟ್ಟರು.

ಅವರು ನ. 4 ರಂದು ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ, ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್, ಗ್ರಾಮ ಪಂಚಾಯತ್ ಕಡಬ, ಸಮುದಾಯ ಆರೋಗ್ಯ ಕೇಂದ್ರ ಕಡಬ, ಡಾ. ಕೆ. ಶಿವರಾಮ್ ಕಾರಂತ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ, ಕಿರಣ್ ಮಹಿಳಾ ತಾಲೂಕು ಒಕ್ಕೂಟ (ರಿ) ಕಡಬ, ಬೆಳ್ತಂಗಡಿ ಸ್ನೇಹಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಹಾಗೂ ಜೀವಜ್ಯೋತಿ ಮಹಾಸಂಘ ಕುಟ್ರುಪಾಡಿ ಇವುಗಳ ಆಶ್ರಯದಲ್ಲಿ ಕಡಬ ಪೇಟೆಯಲ್ಲಿ ನಡೆದ ಕ್ಯಾನ್ಸರ್ ರೋಗದ ವಿರುದ್ಧದ ಬೃಹತ್ ಜನಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಮಾತನಾಡಿದರು.

ಮಾನಿನಿ ರಾಜ್ಯ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ರವರು ಕ್ಯಾನ್ಸರ್ ರೋಗದ ಬಗ್ಗೆ ತಯಾರಿಸಿದ ಕರಪತ್ರವನ್ನು ಅನಾವರಣ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಡಬ ಪಟ್ಟಣ ಪಂಚಾಯತ್ ಸಹಾಯಕರಾದ ಹರೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾಗಿರುವ ವಂದನೀಯ ಫಾ. ಬಿನೋಯಿ ಎ. ಜೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಮೂಲಕ ನಡೆಸಲ್ಪಡುವ ಕ್ಯಾನ್ಸರ್ ರೋಗದ ವಿರುದ್ಧದ ಅಭಿಯಾನದ ಕುರಿತು ಸಮಗ್ರವಾಗಿ ವಿವರಿಸಿದರು.
ಕಿರಣ್ ಮಹಿಳಾ ತಾಲೂಕು ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ಗ್ರೇಸಿ ಪಿಂಟೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಸ್ವಾಗತಿಸಿ, ಕಡಬ ಕಿರಣ್ ಮಹಿಳಾ ತಾಲೂಕು ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ಗ್ರೇಸಿ ಪಿಂಟೋ ಧನ್ಯವಾದವಿತ್ತರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜಾರವರು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕಡಬ ಪೇಟೆಯಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಮೈಕ್ ಉದ್ಘೋಷಣೆ ಮಾಡಿ, ಸಾರ್ವಜನಿಕರಿಗೆ ಕ್ಯಾನ್ಸರ್ ರೋಗದ ಬಗ್ಗೆ ಕರಪತ್ರ ಹಂಚಲಾಯಿತು. ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗ ಪೀಡಿತ ವ್ಯಕ್ತಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಹಾಗೂ ಅಂಗಡಿ ಮುಂಗಟ್ಟುಗಳ ವರ್ತಕರಿಂದ ಧನ ಸಹಾಯ ಸಂಗ್ರಹಣೆ ಮಾಡಲಾಯಿತು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಿಬ್ಬಂದಿ ವರ್ಗ, ಬೆಳ್ಳಾರೆ ಡಾ.ಕೆ. ಶಿವರಾಮ್ ಕಾರಂತ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ವ ಸಹಾಯ ಸಂಘಗಳ ಮಹಿಳೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!