25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ “ ಕನ್ನಡ ಸೇನೆ -ಕರ್ನಾಟಕ” ಬೆಳ್ತಂಗಡಿ ಸಮಿತಿಯಿಂದ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ತಾಲೂಕು ಆಸ್ಪತ್ರೆಯಲ್ಲಿ ಮೂರು ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಂದರ್ಶಿಸಿದ ಸಮಿತಿ, ಆಸ್ಪತ್ರೆಯಲ್ಲಿನ ಚಿಕಿತ್ಸೆ, ಸೇವೆ ಮತ್ತು ಶುಚಿತ್ವದ ಬಗ್ಗೆ ಎಲ್ಲಾ ಚಿಕಿತ್ಸೆ ಪಡೆಯುವವರಲ್ಲಿ ತೃಪ್ತಿಕರ ಮನೋಭಾವನೆಯನ್ನು ಕಂಡು, ಸಂತಸ ವ್ಯಕ್ತಪಡಿಸಿ ಎಲ್ಲರೂ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಇದೇ ಸಂದರ್ಭದಲ್ಲಿ ಆಂಬುಲೆನ್ಸ್‌ನಲ್ಲಿ ವೃದ್ಧೆಯೊಬ್ಬರು ಸರಕಾರಿ ಆಸ್ಪತ್ರೆಗೆ ಬಂದ ವೇಳೆ ಆಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸೆಗೆ ಅವರನ್ನು ಒಳಪಡಿಸುವ ಬಗ್ಗೆ ಕಾಳಜಿ ವಹಿಸಿಕೊಳ್ಳುತ್ತಿರುವುದು ಕಂಡು ಬಂತು. ವೈದ್ಯರಾದ ಡಾ|ಪ್ರೇಮ್ ಮತ್ತು ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ಕನ್ನಡ ಸೇನೆ ಹಿರಿಯ ಮುಖಂಡ ಇಬ್ರಾಹಿಂ ಮತ್ತು ಶಂಶುದ್ದೀನ್ ಪಣಕಜೆ, ಕೃಷ್ಣ ಮತ್ತು ಎಡ್ವಿನ್ ಮಾಲಾಡಿ, ಅಶ್ರಫ್ ಬಸವನಗುಡಿ ಸಹಕಾರದೊಂದಿಗೆ ಸಮಿತಿ ಪರವಾಗಿ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿಯವರು ಹಣ್ಣು ಹಂಪಲು ವಿತರಿಸಿ ಶುಭಾಶಯ ಕೋರಿದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಎ.12:ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ ಅಳದಂಗಡಿಯಲ್ಲಿ ಹನುಮಯಾಗ ಹಾಗೂ ಹನುಮೋತ್ಸವ ಕಾರ್ಯಕ್ರಮ: ಭಾರತೀಯರ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ತುಳು ನಾಟಕ ಪ್ರದರ್ಶನ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya
error: Content is protected !!