24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

ಇಂದಬೆಟ್ಟು : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ಆವರಣದಲ್ಲಿ ನ.6 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷೆ ಪ್ರೇಮಾ, ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಮಲೆನಾಡು ಹಿತ ರಕ್ಷಣಾ ಜಿಲ್ಲಾ ಸಮಿತಿಯ ಸದಸ್ಯ ಕರುಣಾಕರ ಶಿಶಿಲ, ನಾವೂರು ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಗಣೇಶ್ ಗೌಡ, ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷ ವಸಂತ ಗೌಡ ಕಲ್ಲಾಜೆ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಆನಂದ ಅಡೀಲು ಧನ್ಯವಾದವಿತ್ತರು.

ನಂತರ ಗ್ರಾಮ ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya
error: Content is protected !!