ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಉಜಿರೆ: ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗಮಕ ಕಲಾ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಗಮಕ ಕಾರ್ಯಕ್ರಮವು ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.


ಕೌರವೇಂದ್ರನ ಕೊಂದೆ ನೀನು ಕಾವ್ಯದ ವಾಚನವನ್ನು ಶ್ರೀಮತಿ ಮೇಧಾ ಮತ್ತು ವ್ಯಾಖ್ಯಾನವನ್ನು ಸುರೇಶ್ ಕುದ್ರಂತಾಯ ಮತ್ತು ರಾಮಕೃಷ್ಣ ಭಟ್ ಬದನಾಜೆಯವರು ಬಹಳ ಮನೋಜ್ಞವಾಗಿ ನಡೆಸಿಕೊಟ್ಟರು. ಪ್ರಾಂಶುಪಾಲರಾದ ಫಾದರ್ ವಿಜಯ್ ಲೋಬೊರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಸಾಹಿತ್ಯದ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮವನ್ನು ಶ್ರೀಮತಿ ವಿನುತಾರವರು ಶಾರದಾ ಸ್ತುತಿಯೊಂದಿಗೆ ಆರಂಭಿಸಿದರು. ಶಾಲಾ ಶಿಕ್ಷಕರಾದ ಗಣೇಶ್‌ರವರು ಸ್ವಾಗತಿಸಿ, ಅಭಾಸಾಪ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾದ ಪ್ರೊ. ಗಣಪತಿ ಭಟ್ ಕುಳಮರ್ವರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣ್ಯರು ಶಾರದೆಗೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಸಿಬ್ಬಂದಿಗಳೊಂದಿಗೆ 95 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಭಾಸಾಪ ಪದಾಧಿಕಾರಿಗಳಾದ ವಿಶ್ವೇಶ್ವರ ಭಟ್ ಉಂಡೆಮನೆ, ಎಮ್.ಗುರುನಾಥ್ ಪ್ರಭು, ಶ್ರೀನಿವಾಸ ತಂತ್ರಿ ಉಪಸ್ಥಿತರಿದ್ದರು.


ಶ್ರೀಮತಿ ಆಶಾ ಅಡೂರ್ ಕಾರ್ಯಕ್ರಮವನ್ನು ನಿರೂಪಿಸಿದರು, ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿಯವರು ಧನ್ಯವಾದವನ್ನಿತ್ತರು.

Leave a Comment

error: Content is protected !!