April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಎಲ್ಲಾ ಕ್ಷೇತ್ರಗಳಲ್ಲಿ ಇತಿಹಾಸ ಸೃಷ್ಟಿಸಿದ್ದು, ಅವರ ಯೋಚನೆ ಹಾಗೂ ಯೋಜನೆ ಅಭಿನಂದನೀಯ ಮತ್ತು ಅನುಕರಣೀಯವಾಗಿದೆ. ಪ್ರತೀ ವಿಷಯದಲ್ಲೂ ಅವಕಾಶಗಳನ್ನು ಸಮಾಜಕ್ಕೆ ಅರ್ಪಿಸುವ ಪ್ರಯತ್ನ ಮಾಡುತ್ತಿದ್ದು, ಸಮಾಜದ ಎಲ್ಲಾ ವರ್ಗದ ಜನರನ್ನು ಮೇಲಕ್ಕೆ ತರಲು ಪ್ರಯತ್ನಿಸುವ ಅವರ ಕಾರ್ಯ ಶ್ಲಾಘನೀಯ ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಹೇಳಿದರು.

ಇಲ್ಲಿನ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ನ. 6 ರಂದು ಭಿತ್ತಿಪತ್ರಿಕೆ ಅನಾವರಣಗೊಳಿಸಿ ಮಾತನಾಡಿದ ಅವರು, ಹೆಗ್ಗಡೆ ಅವರು ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಮಹಿಳಾ ಸಶಕ್ತೀಕರಣದ ಭಾಗವಾಗಿ ಮಹಿಳೆಯರಿಗೆ ಕೈಗಾರಿಕಾ ತರಬೇತಿ ಸಂಸ್ಥೆಯನ್ನೂ ಸ್ಥಾಪಿಸಿದ್ದಾರೆ. ಅಷ್ಟೇ ಅಲ್ಲದೆ, ರುಡ್ಸೆಟ್’ನಂಥಹ ಸಂಸ್ಥೆಗಳ ಮೂಲಕ ಸಮಾಜಕ್ಕೆ ಸ್ವದ್ಯೋಗದ ಅವಕಾಶಗಳನ್ನೂ ಸೃಷ್ಟಿಸುತ್ತಿದ್ದಾರೆ ಎಂದು ಅವರು ಶ್ಲಾಘನೆ ವ್ಯಕ್ತಪಡಿಸಿದರು.

ವಿದ್ಯಾರ್ಥಿನಿಯರು ಹೊರತಂದಿರುವ ಭಿತ್ತಿಪತ್ರಿಕೆ ಉತ್ತಮವಾಗಿ ಮೂಡಿಬಂದಿದೆ. ಒಂದೊಂದು ಭಿತ್ತಿಪತ್ರಿಕೆಯ ವಿಷಯವೂ ಸಮಾಜದ ಸ್ವಾಸ್ಥ್ಯ ಕಾಪಾಡುವ ಉದ್ದೇಶ ಹೊಂದಿದ್ದು ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಮಹಿಳೆಯರ ಸಶಕ್ತೀಕರಣಕ್ಕೆ ಎಷ್ಟು ಆದ್ಯತೆ ನೀಡುತ್ತಿದೆ ಎಂಬುದು ಇದರಿಂದ ತಿಳಿಯುತ್ತದೆ ಎಂದು ಅವರು ಬಣ್ಣಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಎಸ್.ಡಿ.ಎಂ. ಕಲಾ ಕೇಂದ್ರದ ಉಪನ್ಯಾಸಕಿ ವಿದುಷಿ ಚೈತ್ರ ಅವರು ಮಾತನಾಡಿ, “ಸಾಧ್ಯವಾದಷ್ಟು ಕಲೆಯಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಿ” ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಉತ್ತಮ ಭಿತ್ತಿಪತ್ರಿಕೆಗಳಿಗೆ ಪ್ರಥಮ ಹಾಗೂ ದ್ವಿತೀಯ ಬಹುಮಾನ ನೀಡಲಾಯಿತು. ಇದೇ ಸಂದರ್ಭದಲ್ಲಿ, ದೀಪಾವಳಿ ಪ್ರಯುಕ್ತ ಆಯೋಜಿಸಿದ್ದ ಗೂಡುದೀಪ ಸ್ಪರ್ಧೆಯ ವಿಜೇತರಿಗೆ ಪ್ರಥಮ ಹಾಗೂ ದ್ವಿತೀಯ ಬಹುಮಾನ ನೀಡಲಾಯಿತು.

ವೇದಿಕೆಯಲ್ಲಿ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya
error: Content is protected !!