April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

ನಾವೂರು : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ಆವರಣದಲ್ಲಿ ನ.6 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವರದಿ ವಿರೋಧಿಸಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು, ಕೃಷಿ ಭೂಮಿಗೂ ಅರಣ್ಯ ಭೂಮಿಯ ನಡುವೆ ಆನೆ ಕಂದಕ ನಿರ್ಮಾಣವಾಗಬೇಕು. ಪಶ್ಚಿಮಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ, ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂಬ ಕೆಲವು ಬೇಡಿಕೆಗಳನ್ನು ಮುಂದಿಟ್ಟು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಲೆನಾಡು ಹಿತ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಸದಾನಂದ ಉಂಗಿಲಬೈಲು, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್, ನಾವೂರು ಗ್ರಾ.ಪಂ. ಅಧ್ಯಕ್ಷೆ ಸುನಂದಾ, ಉಪಾಧ್ಯಕ್ಷೆ ಮಮತಾ, ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಮಲೆನಾಡು ಹಿತ ರಕ್ಷಣಾ ಜಿಲ್ಲಾ ಸಮಿತಿಯ ಸದಸ್ಯ ಕರುಣಾಕರ ಶಿಶಿಲ, ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ಸದಸ್ಯ ಸಂದೇಶ್ ಮಲವಂತಿಗೆ , ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ನಾವೂರು ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಗಣೇಶ್ ಗೌಡ ಸ್ವಾಗತಿಸಿದರು, ಡಾ| ಟಿಪಿ ಆಂಟನಿ ದಿಕ್ಸೂಚಿ ಭಾಷಣ ಮಾಡಿದರು. ಧರ್ಣಪ್ಪ ಮೂಲ್ಯ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

ನಂತರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya
error: Content is protected !!