April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಕೊಕ್ಕಡ ವಲಯದ ಹಳ್ಳಿಂಗೇರಿ ಸಮುದಾಯ ಭವನದಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸದಸ್ಯೆ ಪವಿತ್ರರವರು ಉದ್ಘಾಟನೆ ಮಾಡಿ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತಮ ಅವಕಾಶವಿದ್ದು ನಾವು ತರಬೇತಿಗಾಗಿ ಸಮಯ ಮೀಸಲಿಟ್ಟು ಶ್ರದ್ದೆಯಿಂದ ಭಾಗವಹಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಂಚಮಿ ಹಿತಾರ್ಯೂ ಧಾಮ ಆಸ್ಪತ್ರೆಯ ವೈಧ್ಯಾದಿಕಾರಿ ಶ್ರೀಮತಿ ತಾರಾ ರವರು ಮಾತನಾಡುತ್ತಾ ಮಾತೃಶ್ರೀ ಅಮ್ಮನವರು ಎಲ್ಲಾ ಮಹಿಳೆಯರು ಸ್ವಉದ್ಯೋಗ ಮಾಡಲು ಪ್ರೇರಣೆಯನ್ನು ನೀಡುವ ಉದ್ದೇಶದಿಂದ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಅವಕಾಶಗಳನ್ನು ನೀಡುತ್ತಿದ್ದು ಅದಕ್ಕೆ ಪೂರಕವಾಗಿ ನಮ್ಮ ಊರಿನ ಮಹಿಳೆಯರಿಗೆ ಉಚಿತ ತರಬೇತಿ ಪಡೆಯಲು ಅವಕಾಶ ಕಲ್ಪಿಸಿಕೊಟ್ಟಿದ್ದು ಉತ್ತಮ ರೀತಿಯಲ್ಲಿ ಭಾಗವಹಿಸುವಂತೆ ತಿಳಿಸಿದರು.

ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ನಡೆಸಲಾಗುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಾ ಹೊಲಿಗೆ ತರಬೇತಿ ಕಾರ್ಯಕ್ರಮ ಈ ಕಾರ್ಯಕ್ರಮಗಳಲ್ಲಿ ಒಂದಾಗಿದ್ದು ಟೈಲರಿಂಗ್ ಉದ್ಯಮಕ್ಕೆ ಬಹಳಷ್ಟು ಅವಕಾಶಗಳಿದ್ದು ಸಿರಿ ಸಂಸ್ಥೆಯಲ್ಲಿಯೂ ಉದ್ಯೋಗಾವಕಾಶಗಳಿದ್ದು ಎಲ್ಲರೂ ತರಬೇತಿಗೆ ಸಮಯಕ್ಕೆ ಸರಿಯಾಗಿ ಭಾಗವಹಿಸಿ ಉತ್ತಮ ತರಬೇತಿ ಪಡೆದು ಸ್ವಉದ್ಯೋಗ ಮಾಡುವಂತೆ ತಿಳಿಸಿದರು. ತರಬೇತಿ ಶಿಕ್ಷಕಿ ಸುಶೀಲ ರವರು ತರಬೇತಿ ಬರುವಾಗ ತರಬೇಕಾದ ಪರಿಕರಗಳು ಮತ್ತು ಸಮಯದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾವಸoತ್ ಉಪಸ್ಥಿತರಿದ್ದರು. ಸೇವಪ್ರತಿನಿಧಿ ಕುಸುಮಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಅನಿತಾ ಸ್ವಾಗತಿಸಿ, ರೋಹಿಣಿ ವಂದಿಸಿದರು.

Related posts

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!