24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

ಉಜಿರೆ: ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗಮಕ ಕಲಾ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಗಮಕ ಕಾರ್ಯಕ್ರಮವು ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.


ಕೌರವೇಂದ್ರನ ಕೊಂದೆ ನೀನು ಕಾವ್ಯದ ವಾಚನವನ್ನು ಶ್ರೀಮತಿ ಮೇಧಾ ಮತ್ತು ವ್ಯಾಖ್ಯಾನವನ್ನು ಸುರೇಶ್ ಕುದ್ರಂತಾಯ ಮತ್ತು ರಾಮಕೃಷ್ಣ ಭಟ್ ಬದನಾಜೆಯವರು ಬಹಳ ಮನೋಜ್ಞವಾಗಿ ನಡೆಸಿಕೊಟ್ಟರು. ಪ್ರಾಂಶುಪಾಲರಾದ ಫಾದರ್ ವಿಜಯ್ ಲೋಬೊರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಸಾಹಿತ್ಯದ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮವನ್ನು ಶ್ರೀಮತಿ ವಿನುತಾರವರು ಶಾರದಾ ಸ್ತುತಿಯೊಂದಿಗೆ ಆರಂಭಿಸಿದರು. ಶಾಲಾ ಶಿಕ್ಷಕರಾದ ಗಣೇಶ್‌ರವರು ಸ್ವಾಗತಿಸಿ, ಅಭಾಸಾಪ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾದ ಪ್ರೊ. ಗಣಪತಿ ಭಟ್ ಕುಳಮರ್ವರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣ್ಯರು ಶಾರದೆಗೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಸಿಬ್ಬಂದಿಗಳೊಂದಿಗೆ 95 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಭಾಸಾಪ ಪದಾಧಿಕಾರಿಗಳಾದ ವಿಶ್ವೇಶ್ವರ ಭಟ್ ಉಂಡೆಮನೆ, ಎಮ್.ಗುರುನಾಥ್ ಪ್ರಭು, ಶ್ರೀನಿವಾಸ ತಂತ್ರಿ ಉಪಸ್ಥಿತರಿದ್ದರು.


ಶ್ರೀಮತಿ ಆಶಾ ಅಡೂರ್ ಕಾರ್ಯಕ್ರಮವನ್ನು ನಿರೂಪಿಸಿದರು, ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿಯವರು ಧನ್ಯವಾದವನ್ನಿತ್ತರು.

Related posts

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya
error: Content is protected !!