September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

ಮಿತ್ತಬಾಗಿಲು : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಿತ್ತಬಾಗಿಲು ಗ್ರಾಮ ಪಂಚಾಯತ್ ಆವರಣದಲ್ಲಿ ನ.6 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವರದಿ ವಿರೋಧಿಸಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು, ಕೃಷಿ ಭೂಮಿಗೂ ಅರಣ್ಯ ಭೂಮಿಯ ನಡುವೆ ಆನೆ ಕಂದಕ ನಿರ್ಮಾಣವಾಗಬೇಕು. ಪಶ್ಚಿಮಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ, ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂಬ ಕೆಲವು ಬೇಡಿಕೆಗಳನ್ನು ಮುಂದಿಟ್ಟು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ , ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಮಲೆನಾಡು ಹಿತ ರಕ್ಷಣಾ ಜಿಲ್ಲಾ ಸಮಿತಿಯ ಸದಸ್ಯ ಕರುಣಾಕರ ಶಿಶಿಲ, ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಮುಂಡಾಜೆ: ರಾಮ ನಾಯ್ಕ ನಿಧನ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya
error: Content is protected !!