April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

ಅರಸಿನಮಕ್ಕಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ ರವರು ಸರಕಾರ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂದು ಆಗ್ರಹಿಸಿದರು. ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಧರ್ಮರಾಜ್ ಅಡ್ಕಾಡಿ ಹಾಗೂ ಉಪಾಧ್ಯಕ್ಷ ಸುಧೀರ್ ಕುಮಾರ್ ಕಸ್ತೂರಿ ರಂಗನ್ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾ. ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ, ಬಿಜಪಿ ಮುಖಂಡ ಗಣೇಶ್ ಹೊಸ್ತೋಟ, ಗ್ರಾ.ಪಂ ಮಾಜಿ ಸದಸ್ಯ ಸುಂದರ ಗೌಡ ಉಡ್ಯೆರೆ ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ನವೀನ್ ರೆಖ್ಯ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗಣೇಶ್ ಹೊಸ್ತೋಟ ಧನ್ಯವಾದವಿತ್ತರು.

Related posts

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya
error: Content is protected !!