April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಜಿರೆ: ದೇಶ ಸೇವೆಯೇ ಈಶ ಸೇವೆ ಎಂಬ ಸದುದ್ದೇಶದಿಂದ ಪ್ರಾರಂಭವಾದದ್ದೇ ರಾಷ್ಟ್ರೀಯ ಸೇವಾಯೋಜನೆ. ರಾಷ್ಟ್ರೀಯ ಸೇವಾ ಯೋಜನೆಯ ಶಿಕ್ಷಣವು ಜೀವನ ಶಿಕ್ಷಣವಾಗಿದೆ. ಇದರಿಂದ ಆತ್ಮೋನ್ನತಿ ಸಾಧಿಸಲು ಸಾಧ್ಯ. ಹಾಗೆಯೇ ಸಾಮಾಜಿಕ ಕಳಕಳಿಯ ಕಾರ್ಯ ಚಟುವಟಿಕೆಗಳಿಗೆ ಒಳ್ಳೆಯ ವೇದಿಕೆಯಾಗಿದೆ. ಇದರಿಂದ ಒಳ್ಳೆಯ ವ್ಯಕ್ತಿತ್ವ ಶಿಕ್ಷಣ ಹಾಗೂ ಜೀವನಕ್ಕೆ ಮಾರ್ಗದರ್ಶನ ದೊರೆಯುತ್ತದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಕಾರ್ಯಕ್ರಮವನ್ನು ಉದ್ದೇಶಿಸಿ ಯುವ ಜನತೆಗೆ ಸರಿಯಾದ ಮಾರ್ಗದರ್ಶನ ನೀಡುವಲ್ಲಿ ವಿಫಲರಾಗುತ್ತಿದ್ದೇವೆ. ಎಲ್ಲದಕ್ಕೂ ಯುವಶಕ್ತಿಯ ಸದ್ಬಳಕೆ ಆಗಬೇಕಾಗಿದೆ ಇದಕ್ಕಾಗಿ ಯುವಕರು ಸಮಾಜದಲ್ಲಿ ಹಾಗೂ ರಾಷ್ಟ್ರಸೇವೆಯಲ್ಲಿ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಳ್ಳತಕ್ಕದ್ದು ಎಂದು ಕರೆ ನೀಡಿದರು.

ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯಚಂದ್ರ ಸೇನೆರಬೆಟ್ಟು ಇವರು ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು.
ಮೈ ಭಾರತ್ ಪೋರ್ಟಲ್ ಮತ್ತು ಹೆಣ್ಣು ಭ್ರೂಣ ಹತ್ಯೆಯ ನಿಷೇಧದ ಬಗ್ಗೆ ಮಾಹಿತಿ ಇರುವ ಕರಪತ್ರವನ್ನು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ವಾಸುದೇವ ರಾವ್ ಕಕ್ಕೆನೇಜಿ ಅವರು ಬಿಡುಗಡೆಗೊಳಿಸಿದರು.

ಶ್ರೀ ಧ.ಮಂ ಪದವಿಪೂರ್ವ ಕಾಲೇಜಿನ ಉಪಪ್ರಾಚಾರ್ಯರಾದ ಡಾ. ರಾಜೇಶ್ ಬಿ ಅವರು ಗೌರವಿಸಿದರು. ಶಿಬಿರ ಸಮಿತಿಯ ಅಧ್ಯಕ್ಷರಾದ ಮೋಹನ್ ಕಿಲ್ಲೂರು, ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷರಾದ ರಜಿಯಾ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ್ ಪೈಲಾರ್ , ರಾ.ಸೇ. ಯೋಜನೆಯ ಘಟಕದ ನಾಯಕರಾದ ಆದಿತ್ಯ ವಿ ಹಾಗೂ ಪ್ರಾಪ್ತಿ ಗೌಡ ಉಪಸ್ಥಿತರಿದ್ದರು.


ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ವಂದಿಸಿದರು. ಸ್ವಯಂ ಸೇವಕಿ ಸಾಕ್ಷಿ ನಿರೂಪಿಸಿದರು.

Related posts

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya
error: Content is protected !!