38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

ಶಿಬಾಜೆ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ ರವರು ಸರಕಾರ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶಿಬಾಜೆ ಗ್ರಾ. ಪಂಚಾಯತ್ ಅಧ್ಯಕ್ಷೆ ರತ್ನ, ಉಪಾಧ್ಯಕ್ಷ ದಿನಕರ್ ಕುರುಪ್, ನಿಕಟಪೂರ್ವ ಉಪಾಧ್ಯಕ್ಷ ವಿನಯ ಚಂದ್ರ ಟಿ., ಮಾಜಿ ಉಪಾಧ್ಯಕ್ಷ ಪರಮೇಶ್ವರ ಪೂಜಾರಿ, ಶಿಶಿಲ ಪಂಚಾಯತ್ ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ಮಹೇಶ್ ಶೆಟ್ಟಿಗಾರ್, ರಮೇಶ್ ಕುರುಂಜ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಜಯರಾಮ್ ಶಿಬಾಜೆ ಸ್ವಾಗತಿಸಿ, ಧನ್ಯವಾದವಿತ್ತರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya
error: Content is protected !!